ಅಮೇಥಿ: ರೈತರ ಸಮಸ್ಯೆಗಳ ಬಗ್ಗೆ ಇನ್ನಿಲ್ಲದ ಕಾಳಜಿ ತೋರಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಟಾಂಗ್ ಕೊಡುವ ನಿಟ್ಟಿನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಮಂಗಳವಾರ ಅಮೇಥಿಯಲ್ಲಿ ರೈತ ಪಂಚಾಯತಿ ನಡೆಸಿ, ರೈತರೊಂದಿಗೆ ಸಂವಾದ ನಡೆಸಿದರು ಮತ್ತು ಅವರ ಕಷ್ಟಗಳನ್ನು ಆಲಿಸಿದರು.
ಅಮೇಥಿ ರಾಹುಲ್ ಗಾಂಧೀಯವರ ಲೋಕಸಭಾ ಕ್ಷೇತ್ರವಾಗಿದೆ. ಬೇರೆಡೆಗೆ ತೆರಳಿ ರೈತರ ಸಮಸ್ಯೆಯನ್ನು ಆಲಿಸುವ ರಾಹುಲ್ ಅಲ್ಲಿಗೆ ಇದುವರೆಗೆ ಹೋಗಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇರಾನಿ ‘ಅಮೇಥಿಯಿಂದ ರಾಹುಲ್ ನಾಪತ್ತೆಯಾಗಿದ್ದಾರೆ, ನನ್ನಂತೆಯೇ ಅವರು ಕೂಡ ಇಲ್ಲಿನ ಜನರ ಸಮಸ್ಯೆಗಳನ್ನು ಆಲಿಸುತ್ತಾರೆ ಎಂದು ನಂಬಿದ್ದೇನೆ’ ಎಂದಿದ್ದಾರೆ.
ಈ ಹಿಂದೆ ಅಧಿಕಾರದಲ್ಲಿದ್ದಾಗಲೇ ಅವರು ಅಮೇಥಿಗಾಗಿ ಸಾಕಷ್ಟನ್ನು ಮಾಡಬಹುದಿತ್ತು ಎಂದು ಅವರು ರಾಹುಲ್ಗೆ ಟಾಂಗ್ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.