ರಾಲೆಗಾಂವ್: ಲೋಕಪಾಲರನ್ನು ನೇಮಿಸಲು ಕೇಂದ್ರ ವಿಫಲವಾಗಿರುವುದರಿಂದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಮತ್ತೊಂದು ಸುತ್ತಿನ ಉಪವಾಸ ಸತ್ಯಾಗ್ರಹವನ್ನು ನಡೆಸಲು ಮುಂದಾಗಿದ್ದಾರೆ.
ತಮ್ಮ ಹುಟ್ಟೂರು ರಾಲೆಗಾಂವ್ ಸಿದ್ದಿಯಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಣ್ಣಾ ಹಜಾರೆ, ‘ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಮುಖೇನ ಸತ್ಯಾಗ್ರಹ ಆರಂಭಿಸುವ ಬಗ್ಗೆ ತಿಳಿಸಿದ್ದೇನೆ, ಶೀಘ್ರದಲ್ಲೇ ಮತ್ತೊಂದು ಪತ್ರ ಬರೆಯಲಿದ್ದು, ಅದರಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸುವ ದಿನಾಂಕವನ್ನು ತಿಳಿಸಲಿದ್ದೇನೆ’ ಎಂದಿದ್ದಾರೆ.
3 ವರ್ಷಗಳಿಂದ ಅಧಿಕಾರದಲ್ಲಿದ್ದರೂ ಮೋದಿ ಸರ್ಕಾರ ಲೋಕಪಾಲ ಮಸೂದೆಯನ್ನು ಜಾರಿಗೆ ತರುವಲ್ಲಿ ವಿಫಲವಾಗಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘3 ವರ್ಷಗಳಿಂದ ನಾನು ಸುಮ್ಮನಿದ್ದೆ, ಆದರೆ ಸತ್ಯಾಗ್ರಹವನ್ನು ಪುನರಾರಂಭಿಸುವ ಸಮಯ ಬಂದಿದೆ, ಲೋಕಪಾಲವನ್ನು ಅನುಷ್ಟಾನಗೊಳಿಸದೇ ಇರುವುದು ಜನರ ಭಾವನೆಗಳಿಗೆ ಮಾಡಿದ ದೊಡ್ಡ ಅವಮಾನ’ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.