ಲಕ್ನೋ: ಸಾರ್ವಜನಿಕರಲ್ಲಿ ಸುರಕ್ಷತಾ ಭಾವವನ್ನು ಮೂಡಿಸಲು ಮತ್ತು ಅಪರಾಧಿಗಳಿಗೆ ನಡುಕು ಹುಟ್ಟಿಸುವ ಸಲುವಾಗಿ ಕಾರ್ಯಶೈಲಿಯಲ್ಲಿ ಬದಲಾವಣೆಗಳನ್ನು ತರಬೇಕು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪೊಲೀಸರಿಗೆ ಕರೆ ನೀಡಿದ್ದಾರೆ.
ಲಕ್ನೋದಲ್ಲಿ ಪರಿಶೀಲನಾ ಸಭೆ ನಡೆಸಿದ ಅವರು, ಪೊಲೀಸರ ಕಾರ್ಯ ಪಾರದರ್ಶಕವಾಗಿರಬೇಕು ಮತ್ತು ಭ್ರಷ್ಟಾಚಾರ ಮುಕ್ತವಾಗಿರಬೇಕು ಎಂದರು.
ಅಲ್ಲದೇ ಜನರೊಂದಿಗೆ ನೇರ ಸಂಪರ್ಕವನ್ನು ಇಟ್ಟುಕೊಳ್ಳಬೇಕು ಮತ್ತು ಸಣ್ಣ ಪ್ರಕರಣದ ಬಗ್ಗೆಯೂ ಸ್ವಯಂಪ್ರೇರಿತರಾಗಿ ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ಪೊಲೀಸರಿಗೆ ತಿಳಿಸಿದರು.
ಗ್ರೇಟರ್ ನೊಯ್ಡಾದಲ್ಲಿ ನಡೆದ ಆಫ್ರಿಕನ್ ವಿದ್ಯಾರ್ಥಿ ಮೇಲಿನ ಹಲ್ಲೆ ಹಾಗೂ ಸಂತ್ ಕಬೀರ್ ನಗರದಲ್ಲಿ ನಡೆದ ಸ್ಫೋಟದ ಬಗ್ಗೆಯೂ ಅವರು ಸಭೆಯಲ್ಲಿ ಚರ್ಚೆ ನಡೆಸಿದರು.
ಕಾರ್ಯ ಯೋಜನೆಯನ್ನು ಶೀಘ್ರದಲ್ಲಿ ಮಾಡಿ ಅನುಷ್ಟಾನಕ್ಕೆ ತರಬೇಕು ಮತ್ತು ಪೊಲೀಸರು ಸುಸ್ಥಳದಲ್ಲಿ ನಿಯೋಜನೆಯಾಗಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಅವರು ಆದೇಶಿಸಿದ್ದಾರೆ.
ಗಸ್ತು ತಿರುಗುವುದರಿಂದ ಸಾರ್ವಜನಿಕರಲ್ಲಿ ಸುರಕ್ಷತಾ ಮನೋಭಾವ ಮತ್ತು ಅಪರಾಧಿಗಳಲ್ಲಿ ಭಯ ಹುಟ್ಟುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.