ಹುಬ್ಬಳ್ಳಿ: ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ. ಅಂತೆಯೇ ಅದು ಕೆಲವರಿಗೆ ಕಬ್ಬಿಣದ ಕಡಲೆ. ಕೆಲವರಿಗೆ ಸಲೀಸು. ಹೀಗೇ ಹೂವು ಮುಳ್ಳಿನ ಹಾದಿಯಂತೆ ಎಸ್ಎಸ್ಎಲ್ಸಿ ಪರೀಕ್ಷೆ.
ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ವೇಮನ ವಿದ್ಯಾವರ್ಧಕ ಸಂಘದ ಕೆ.ಎಚ್.ಪಾಟೀಲ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪೆನ್ನು ಮತ್ತು ಗುಲಾಬಿಯನ್ನು ವಿತರಿಸಿ ಶುಭ ಕೋರಲಾಗಿದೆ. ಪರೀಕ್ಷೆ ಹೂವಿನಂತೆ ಹಗುರವಾಗಿರಲಿ ಎಂಬ ಆಶಯ ಇದರ ಉದ್ದೇಶವಂತೆ.
ಕಾಲೇಜಿನ ಪ್ರಾಚಾರ್ಯ ಎಸ್.ಬಿ.ಸಣಗೌಡರ ಹಾಗೂ ಸಿಬ್ಬಂದಿ ವರ್ಗ ಈ ಅಪರೂಪದ ಸ್ವಾಗತಕ್ಕೆ ಸಾಕ್ಷಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.