ಲಖ್ನೌ: ಹಿರಿಯ ಬಿಜೆಪಿ ನಾಯಕ ಹೃದಯ್ ನಾರಾಯಣ್ ದೀಕ್ಷಿತ್ ಅವರನ್ನು ಉತ್ತರಪ್ರದೇಶ ವಿಧಾನಸಭಾ ಸ್ಪೀಕರ್ ಸರ್ವಾನುಮತದಿಂದ ಆಯ್ಕೆ ಮಡಲಾಗಿದೆ.
ದೀಕ್ಷಿತ್ ಅವರನ್ನು ವಿಧಾನಸಭೆಯ ೧೭ನೇ ಸ್ಪೀಕರ್ ಆಗಿ ಆಯ್ಕೆ ಮಾಡಿರುವುದಾಗಿ ವಿಧಾನಸಭಾ ಕಾರ್ಯದರ್ಶಿ ತಿಳಿಸಿದ್ದಾರೆ.
ಐದು ಬಾರಿ ಶಾಸಕರಾಗಿರುವ ನಾರಾಯಣ್ ದೀಕ್ಷಿತ್ ಅವರು, ಈ ಹಿಂದೆ ಪಂಚಾಯತ್ ರಾಜ್ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರು ಈವರೆಗೆ ಬಿಜೆಪಿಯ ವಿಧಾನಪರಿಷತ್ ನಾಯಕರಾಗಿದ್ದರು.
ಅವರು ಓರ್ವ ಅಂಕಣಕಾರರೂ ಆಗಿದ್ದು, ಹಲವು ಪುಸ್ತಕಗಳನ್ನೂ ಬರೆದಿದ್ದಾರೆ.
ಉತ್ತರಪ್ರದೇಶದ ವಿಧಾನಸಭಾ ಸ್ಪೀಕರ್ ಚುನಾವಣೆಗೆ ಬುಧವಾರ ನಾಮಪತ್ರ ಸಲ್ಲಿಸಲಾಗಿತ್ತು. ನಾರಾಯಣ್ ದೀಕ್ಷಿತ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.