News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಧು-ವರ ಅನ್ವೇಷಣೆ ಕಾರ್ಯಕ್ರಮ

bride-groomಬಂಟ್ವಾಳ: ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಆಶ್ರಯದಲ್ಲಿ ಬಂಟ್ವಾಳ ತಾ. ಬಿಲ್ಲವ ಸಮಾಜ ಸೇವಾ ಸಂಘದ ಸಹಕಾರದೊಂದಿಗೆ ವಧು-ವರ ಅನ್ವೇಷಣೆ ಕಾರ್ಯಕ್ರಮ ಎಪ್ರಿಲ್ 19ರಂದು ಬಿ.ಸಿ.ರೋಡ್‌ನ ಗಾಣದ ಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.

ಈ ಕುರಿತು ಬಂಟ್ವಾಳ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅಸೋಸಿಯೇಶನ್ ಅಧ್ಯಕ್ಷ ಎಂ. ವೇದಕುಮಾರ್ ಅವರು ಆಸಕ್ತರು ನಿಗದಿತ ಅರ್ಜಿಯನ್ನು ಬಂಟ್ವಾಳ ತಾ. ಬಲ್ಲವ ಸಂಘದ ಕಚೇರಿ, ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಪಡೆದು ಎಪ್ರಿಲ್ 15ರ ಒಳಗಾಗಿ ಭರ್ತಿ ಮಾಡಿ ಸಲ್ಲಿಸಬೇಕೆಂದರು. ಮಂಗಳೂರು, ಕಾಸರಗೋಡು, ಶಿವಮೊಗ್ಗ, ಉಡುಪಿ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಮಂದಿ ವಧುವರರು ಭಾಗವಹಿಸಲಿದ್ದಾರೆ. ಇವರಿಗೆ ತಂಗಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಹೇಳಿದ ಅವರು ಅಂದು ಕಾರ್ಯಕ್ರಮವನ್ನು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರು ಉದ್ಘಾಟಿಸಲಿದ್ದಾರೆ ಎಂದರು.

ವಧು-ವರರ ಅನ್ವೇಷಣೆಯ ಸಂದರ್ಭದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸುವುದು, ಅದ್ದೂರಿಯ ಮೆಹಂದಿ, ವಿವಾಹ ಕಾರ್ಯಕ್ರಮಕ್ಕೆ ಕಡಿವಾಣ ಹಾಕಲು ಅಸೋಸಿಯೇಶನ್ ಶ್ರಮಿಸುತ್ತಿದ್ದು, ಈ ದಿಸೆಯಲ್ಲಿ ಕಳೆದ ನಾಲ್ಕೈದು ವರ್ಷದಿಂದ ಈ ಕಾರ್ಯಕ್ರಮವನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸೇಸಪ್ಪ ಕೋಟ್ಯಾನ್, ರಾಜೇಶ್ ಕುಮಾರ್, ಭಾಸ್ಕರ ಪೂಜಾರಿ, ಬೇಬಿ ಕುಂದರ್, ರಾಜೇಶ್ ಸುವರ್ಣ, ತಿಮ್ಮಪ್ಪ ಪೂಜಾರಿ, ಮಾಲತಿ ಎಸ್ ಪೂಜಾರಿ ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top