ನವದೆಹಲಿ: ಭಾರತದಲ್ಲಿ 5 ದಿನಗಳ ಕಾಲ ನಡೆಯುವ ಅತಿ ದೊಡ್ಡ ‘ನಮಾಮಿ ಬ್ರಹ್ಮಪುತ್ರ’ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.
ಅಸ್ಸಾಂ ಸರ್ಕಾರ ಪ್ರಾರಂಭಿಸಿರುವ ನಮಾಮಿ ಬ್ರಹ್ಮಪುತ್ರ ಉತ್ಸವ ಒಂದು ಅತಿ ಹೆಮ್ಮೆಯ ವಿಷಯ. ಈ ಉತ್ಸವಕ್ಕೆ ಶುಭಾಶಯಗಳು. ಇದು ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳ ಜನರ ಜೀವನಾಧಾರವಾಗಿದೆ.
ನದಿಗಳು ಭಾರತದ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಭಾರತದ ಬೆಳವಣಿಗೆಗೆ ಸ್ವಚ್ಛ ನದಿಗಳನ್ನು ಖಚಿತಪಡಿಸಲು ನಾವು ಒಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಮಾಮಿ ಬ್ರಹ್ಮಪುತ್ರ ಬಗ್ಗೆ ಹೆಚ್ಚಿನ ವಿವರಗಳನ್ನು http://namamibrahmaputra.com ಪಡೆಯಬಹುದು ಎಂದು ಈ ವೇಳೆ ಪ್ರಧಾನಿ ಮೋದಿ ಹೇಳಿದ್ದಾರೆ.
ನಮಾಮಿ ಬ್ರಹ್ಮಪುತ್ರ ಉತ್ಸವ ಮಾರ್ಚ್ 31ರಿಂದ ಎಪ್ರಿಲ್ 4ರ ವರೆಗೆ ಅಸ್ಸಾಂನ 21 ಜಿಲ್ಲೆಗಳಲ್ಲಿ ನಡೆಯಲಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.