ನವದೆಹಲಿ: ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ಕಾಶ್ಮೀರದ ಯುವಕರು ಪಾಕಿಸ್ಥಾನದಿಂದ ಬ್ರೇನ್ವಾಶ್ಗೆ ಒಳಗಾಗಿದ್ದಾರೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ’ಪಾಕಿಸ್ಥಾನದಿಂದ ಪ್ರಚೋದನೆಗೊಳಗಾಗಬೇಡಿ, ನಿಮ್ಮನ್ನು ಬಳಸಿ ಪಾಕಿಸ್ಥಾನ ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ’ ಎಂದು ಅವರು ಕಾಶ್ಮೀರಿಗರಿಗೆ ಕರೆ ನೀಡಿದ್ದಾರೆ.
‘ಭಯೋತ್ಪಾದಕರೊಂದಿಗೆ ಯಾವ ರೀತಿ ವ್ಯವಹರಿಸಬೇಕೋ ಅದೇ ರೀತಿ ನಮ್ಮ ಸೇನೆ ವ್ಯವಹರಿಸುತ್ತಿದೆ, ಮುಂದೆಯೂ ವ್ಯವಹರಿಸುತ್ತದೆ’ ಎಂದು ಸಿಂಗ್ ಹೇಳಿದ್ದಾರೆ.
ವಾಟ್ಸ್ ಆಪ್, ಫೇಸ್ಬುಕ್ ಮೂಲಕ ಕಾಶ್ಮೀರಿ ಯುವಕರನ್ನು ಪ್ರಚೋದಿಸಿ ಒಟ್ಟು ಸೇರಿಸುತ್ತಿದ್ದಾರೆ. ಈ ಸಾಮಾಜಿಕ ಜಾಲತಾಣಗಳನ್ನು ಪಾಕ್ ನೆಲದಿಂದಲೇ ಆಪರೇಟ್ ಮಾಡಲಾಗುತ್ತಿದೆ ಎಂದರು.
ಎನ್ಕೌಂಟರ್ ನಡೆಯುವ ಸ್ಥಳಕ್ಕೆ ಆಗಮಿಸಿ ಕಲ್ಲು ತೂರಾಟ ನಡೆಸುವ ಮೂಲಕ ಕೆಲ ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಇತ್ತೀಚಿಗಷ್ಟೇ ಜಮ್ಮು ಕಾಶ್ಮೀರದ ಪೊಲೀಸ್ ಮುಖ್ಯಸ್ಥರು ಹೇಳಿದ್ದರು.
ಕಳೆದ ವಾರ ಉಗ್ರರ ವಿರುದ್ಧ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದು 3 ಮಂದಿ ಅಸುನೀಗಿದ್ದರು, 13 ಮಂದಿಗೆ ಗಾಯವಾಗಿತ್ತು. ಈ ಹಿನ್ನಲೆಯಲ್ಲಿ ರಾಜನಾಥ್ ಸಿಂಗ್ ಮತ್ತು ಪೊಲೀಸ್ ಮುಖ್ಯಸ್ಥ ಕಾಶ್ಮೀರ ಯುವಕರಿಗೆ ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.