ಭೋಪಾಲ್: ಅಪ್ರಾಪ್ತ ಬಾಲಕಿಯರನ್ನು ಅತ್ಯಾಚಾರ ಮಾಡುವ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸುವ ಸಲುವಾಗಿ ಕ್ರಿಮಿನಲ್ ಕಾನೂನಿಗೆ ತಿದ್ದುಪಡಿ ತರಲು ಮಧ್ಯಪ್ರದೇಶ ಮುಂದಾಗಿದೆ.
‘ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಗೊಳ್ಳಲಿದೆ. ಅಲ್ಲಿ ಅನುಮೋದನೆ ಸಿಕ್ಕ ಬಳಿಕ ಮಸೂದೆಯನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿಕೊಡಲಾಗುತ್ತದೆ’ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌವ್ಹಾಣ್ ತಿಳಿಸಿದ್ದಾರೆ.
ಮಧ್ಯಪ್ರದೇಶ ಪೊಲೀಸ್ ಅಕಾಡಮಿಯ ’ಜಂಟಿ ಘಟಿಕೋತ್ಸವ ಸಮಾರಂಭ’ದಲ್ಲಿ ಚೌವ್ಹಾಣ್ ಈ ಘೋಷಣೆಯನ್ನು ಮಾಡಿದ್ದಾರೆ.
‘ಉತ್ತಮ ಕಾನೂನು ಸುವ್ಯವಸ್ಥೆ ರಾಷ್ಟ್ರ ಮತ್ತು ರಾಜ್ಯಗಳ ಅಭಿವೃದ್ಧಿಗೆ ಅತ್ಯಗತ್ಯ. ಇದು ಪೊಲೀಸರ ಆದ್ಯ ಕರ್ತವ್ಯವೂ ಹೌದು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಹಿಳೆಯರು ಯಾರಿಗೂ ಕಡಿಮೆಯಲ್ಲ, ಹೀಗಾಗಿಯೇ ಪೊಲೀಸ್ ಇಲಾಖೆಯಲ್ಲಿ 1/3 ಭಾಗವನ್ನು ಅವರಿಗೆ ಮೀಸಲಿಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.