ಪಾಟ್ನಾ: ಉತ್ತರಪ್ರದೇಶ, ಜಾರ್ಖಾಂಡ್, ರಾಜಸ್ಥಾನ, ಮಧ್ಯಪ್ರದೇಶಗಳ ಬಳಿಕ ಇದೀಗ ಬಿಜೆಪಿಯೇತರ ರಾಜ್ಯ ಬಿಹಾರದಲ್ಲೂ ಅಕ್ರಮ ಕಸಾಯಿಖಾನೆ ವಿರುದ್ಧದ ಸಮರ ಆರಂಭಗೊಂಡಿದೆ.
ಬಿಹಾರದ ರೋಹ್ಟಸ್ ಜಿಲ್ಲೆಯಲ್ಲಿ 7 ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲಾಗಿದೆ.
ಈ ಜಿಲ್ಲೆಯಲ್ಲಿನ ಎಲ್ಲಾ ಅಕ್ರಮ ಕಸಾಯಿಖಾನೆಗಳನ್ನು 6 ವಾರಗಳೊಳಗೆ ಮುಚ್ಚಬೇಕು ಎಂಬುದಾಗಿ ಪಾಟ್ನಾ ಹೈಕೋರ್ಟ್ ಆದೇಶಿಸಿತ್ತು.
ಈ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಜಿಲ್ಲಾಡಳಿತದ ಅಧಿಕಾರಿಗಳು ಬೀಗ ಹಾಕುವ ಪ್ರಕ್ರಿಯೆಯನ್ನು ನಡೆಸಿದರು.
ಉತ್ತರಪ್ರದೇಶದಲ್ಲಿ ಈಗಾಗಲೇ ಬಹುತೇಕ ಕಸಾಯಿಖಾನೆಗಳಿಗೆ ಬೀಗ ಜಡಿಯಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.