ಉಧಮ್ಪುರ್: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಸುಮಾರು 7 ಸಾವಿರ ಕೋಟಿ ರೂಪಾಯಿ ಮೊತ್ತದ ಕಾರ್ಯಗಳು ಮುಂದಿನ ಎರಡು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಒಟ್ಟು 13 ಯೋಜನೆಗಳನ್ನು ನಾವು ಕೈಗೆತ್ತಿಕೊಳ್ಳಲಿದ್ದೇವೆ, ಇದರಿಂದ ಅಲ್ಲಿನ ಜನರ ರಸ್ತೆ ಸಂಪರ್ಕ ಮತ್ತು ರಸ್ತೆ ಸಂವಹನಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದರು.
ಅಲ್ಲದೇ ಜಮ್ಮುವಿನಲ್ಲಿ 2,100 ಕೋಟಿ ರೂಪಾಯಿ ವೆಚ್ಚದ ಮತ್ತು ಶ್ರೀನಗರದಲ್ಲಿ 2,200 ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದಿನ 3 ತಿಂಗಳಲ್ಲಿ ರಿಂಗ್ ರೋಡ್ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದರು.
ಅಲ್ಲದೇ ಇಲ್ಲಿ 6 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಝೊಜಿಲ್ಲಾ ಟನಲ್ ನಿರ್ಮಾಣಕ್ಕೂ ಕೇಂದ್ರ ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.