ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ವಿರುದ್ಧದ ದೌರ್ಜನ್ಯ ಪ್ರಕರಣಗಳ ತ್ವರಿತ ಇತ್ಯರ್ಥಕ್ಕಾಗಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಅವರ ಸರ್ಕಾರ 25 ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಿದೆ.
ಉತ್ತರಪ್ರದೇಶದ ಕಾನೂನು ಇಲಾಖೆ ಈ ಯೋಜನೆಗೆ ಈಗಾಗಲೇ ಮೊದಲ ಆದ್ಯತೆ ನೀಡಿದ್ದು, ಇದಕ್ಕೆ ತಗಲುವ ವೆಚ್ಚ ೧೦೦ ಕೋಟಿ ಎಂದು ಅಂದಾಜಿಸಲಾಗಿದೆ. ಈ ಪ್ರಸ್ತಾವಣೆಯನ್ನು ಶೀಘ್ರದಲ್ಲೇ ಅನುಮತಿಗಾಗಿ ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗುತ್ತಿದೆ.
ಈ ನೂತನ ನ್ಯಾಯಾಲಯಗಳಲ್ಲಿ ಕಾರ್ಯ ಮಾಡುವ ಸಲುವಾಗಿ ಹೊಸ 275 ಪೋಸ್ಟ್ಗಳನ್ನು ಸರ್ಕಾರ ರಚಿಸಲಿದೆ, ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಇದರ ನೇತೃತ್ವ ವಹಿಸಲಿದ್ದಾರೆ ಎನ್ನಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯಡಿ ಈ ಕೋರ್ಟ್ಗಳನ್ನು ಸ್ಥಾಪಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.