ಲಕ್ನೋ: ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ತನ್ನ ಸೋಲಿಗೆ ಸಮಾಜವಾದಿ ಪಕ್ಷದ ನಾಯಕರೇ ಕಾರಣ ಎಂದು ಸಮಾಜವಾದಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಆರೋಪಿಸಿದ್ದಾರೆ.
ತನ್ನ ಪತಿಯ ಅಣ್ಣ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ವಿರುದ್ಧ ಕಿಡಿಕಾರಿರುವ ಅವರು, ‘ನನಗೆ ತುಂಬಾ ಹತ್ತಿರದವರಾದ, ನನ್ನ ಸ್ವಂತ ಪಕ್ಷದ ನಾಯಕರ ಕುತಂತ್ರದಿಂದಾಗಿ ನನಗೆ ಸೋಲಾಯಿತು. ನನಗೆ ಅವರು ಸಕ್ರಿಯ ಪ್ರಚಾರ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಮತಯಂತ್ರದಲ್ಲಿ ದೋಷವಿದ್ದರೆ ಚುನಾವಣಾ ಆಯೋಗ ಚುನಾವಣೆಯನ್ನು ರದ್ದುಗೊಳಿಸುತ್ತಿತ್ತು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.