ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಕಾನೂನು ಬಾಹಿರವಾಗಿ ನೆಲೆಸಿರುವ 10 ಸಾವಿರ ಮಯನ್ಮಾರ್ ಮೂಲದ ರೊಹಿಂಗ್ಯ ಮುಸ್ಲಿಮರನ್ನು ಗಡಿಪಾರು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಭಾರತ-ಬಾಂಗ್ಲಾದೇಶ ಮತ್ತು ಭಾರತ-ಮಯನ್ಮಾರ್ ಅಥವಾ ಬಂಗಾಲಕೊಲ್ಲಿಯ ಮೂಲಕ ಇವರು ಅಕ್ರಮವಾಗಿ ಬಂದು ಇಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಜಮ್ಮು ಕಾಶ್ಮೀರ ಸರ್ಕಾರ ರೊಹಿಂಗ್ಯಾಗಳನ್ನು ಗುರುತಿಸಿ, ಗಡಿಪಾರು ಮಾಡುವ ವಿಧಾನಗಳ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹ್ರರ್ಶಿ ಮತ್ತು ಜಮ್ಮು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಬ್ರಜ್ ರಾಜ್ ಶರ್ಮಾ ಅವರ ನಡುವೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.
ವರದಿಗಳ ಪ್ರಕಾರ ದೇಶದ ವಿವಿಧ ಭಾಗಗಳಲ್ಲಿ ಸುಮಾರು 40 ಸಾವಿರ ರೊಹಿಂಗ್ಯಾ ಮುಸ್ಲಿಮರು ಅಕ್ರಮವಾಗಿ ನೆಲೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.