ನವದೆಹಲಿ: ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ನಲ್ಲಿ ಸೋಮವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಭಯೋತ್ಪಾದನೆಯನ್ನು ತುರ್ತಾಗಿ ಮತ್ತು ವಿಸ್ತೃತವಾಗಿ ವ್ಯವಹರಿಸಬೇಕು ಎಂಬುದನ್ನು ಜ್ಞಾಪಿಸುತ್ತದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಸೇಂಟ್ ಪೀಟರ್ಸ್ಬರ್ಗ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಜೀವ ಕಳೆದುಕೊಂಡವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ ರಾಷ್ಟ್ರಪತಿ ಮುಖರ್ಜಿ ಅವರು, ಈ ಸಂದರ್ಭದಲ್ಲಿ ಭಾರತೀಯರು ರಷ್ಯಾದ ಪರವಾಗಿದ್ದಾರೆ. ಬಾಂಬ್ ದಾಳಿಯಲ್ಲಿ ಗಾಯಗೊಂಡವರು ಬೇಗನೇ ಚೇತರಿಸಿಕೊಳ್ಳಲು ನಾವು ಪ್ರಾರ್ಥಿಸುತ್ತೇವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸಂದೇಶ ರವಾನಿಸಿದ್ದಾರೆ.
ಭಯೋತ್ಪಾದನೆ ಪಿಡುಗನ್ನು ನಿವಾರಿಸಲು ವಿಶ್ವ ಸಮುದಾಯ ತುರ್ತಾಗಿ ಮತ್ತು ಸಮಗ್ರವಾಗಿ ವ್ಯವಹರಿಸಬೇಕು ಎಂಬುದನ್ನು ಇದು ನೆನಪಿಸುತ್ತದೆ ಎಂದು ಮುಖರ್ಜಿ ಹೇಳಿದ್ದಾರೆ.
ಸೇಂಟ್ ಪೀಟರ್ಸ್ಬರ್ಗ್ನಲ್ಲಿ ನಡೆದ ಮೆಟ್ರೋ ರೈಲು ದಾಳಿಯಲ್ಲಿ 14 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.