ಲಕ್ನೋ: ಶಿಕ್ಷಣ ಮತ್ತು ರಸ್ತೆ ನಮ್ಮ ಸರ್ಕಾರದ ಪ್ರಮುಖ ಅಜೆಂಡಾವಾಗಿದ್ದು, ಇದರಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಶೀಘ್ರದಲ್ಲೇ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೇಳಿದ್ದಾರೆ.
ಖಾಸಗಿ ಶಾಲೆಗಳು ಶುಲ್ಕವನ್ನು ಅತಿಯಾಗಿ ಹೆಚ್ಚಳ ಮಾಡಿರುವುದನ್ನು ಖಂಡಿಸಿರುವ ಅವರು ಈ ನಿಟ್ಟಿನಲ್ಲಿ ನಿಯಮಗಳನ್ನು ರೂಪಿಸಿ ಕ್ರಮಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಶಿಕ್ಷಣ ಮತ್ತು ಮಕ್ಕಳ ಭವಿಷ್ಯದ ಬಗ್ಗೆ ಕಳವಳವನ್ನೂ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಜ್ಯ ಶಿಕ್ಷಣ ಇಲಾಖೆಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿರುವ ಅವರು ಅತೀ ಶೀಘ್ರದಲ್ಲೇ ನಿಯಮಗಳು ಜಾರಿಯಾಗಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಇಲಾಖೆಯ ಕಾರ್ಯಯೋಜನೆಯನ್ನು ಸರಿಪಡಿಸಿಕೊಳ್ಳಲು 100 ದಿನಗಳ ಸಮಯಾವಕಾಶವನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಸ್ತೆಗಳಿಗೂ ಹೆಚ್ಚಿನ ಒತ್ತು ನೀಡಿರುವ ಸಿಎಂ ಯೋಗಿ, 2017ರ ಜೂನ್ ಒಳಗೆ ಉತ್ತರಪ್ರದೇಶದ ಎಲ್ಲಾ ರಸ್ತೆಗಳ ಗುಂಡಿ ರಹಿತವಾಗಿರಬೇಕು ಎಂದು ಆದೇಶಿಸಿದ್ದಾರೆ. ಅಲ್ಲದೇ 60 ಸಾವಿರ ಕಿ.ಮೀ ರಸ್ತೆಯನ್ನು ಗುಂಡಿ ರಹಿತವನ್ನಾಗಿಸಲು 3 ಸಾವಿರ ಕೋಟಿ ರೂಪಾಯಿಯನ್ನು ಘೋಷಿಸಿದ್ದಾರೆ. ಈಗಾಗಲೇ ಇದರಲ್ಲಿ 942 ಕೋಟಿಯನ್ನು ಬಿಡುಗಡೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.