ನವದೆಹಲಿ: ಒಂದೆಡೆ ಚುನಾವಣೆಯಲ್ಲಿ ಬಳಸಲಾಗುವ ಇವಿಎಂ ಮತಯಂತ್ರದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಭಾರತದ ರಾಜಕಾರಣಿಗಳು ಗಂಭೀರ ಆರೋಪ ನಡೆಸುತ್ತಿದ್ದರೆ ಮತ್ತೊಂದೆಡೆ 2018ರ ಅಧ್ಯಕ್ಷೀಯ ಚುನಾವಣೆಯಲ್ಲಿ ಈ ತಂತ್ರಜ್ಞಾನ ಬಳಸುವ ಬಗ್ಗೆ ರಷ್ಯಾ ಚಿಂತಿಸುತ್ತಿದೆ.
ರಷ್ಯಾ ಇವಿಎಂ ತಂತ್ರಜ್ಞಾನ ಬಳಕೆಯಲ್ಲಿ ಭಾರತದ ಅನುಭವವನ್ನು ಅರಿತು ದುನಾವಣೆ ನಡೆಸಲು ಚಿಂತಿಸಿದೆ. ರಷ್ಯಾದ ಚುನಾವಣಾ ಆಯೋಗದ ಉಪಾಧ್ಯಕ್ಷ ನಿಕೊಲೈ ಲೆವಿಚೆವ್ ಇವಿಎಂ ಮತಯಂತ್ರಗಳ ಮೂಲಕ ಮತದಾನ ಪ್ರಕ್ರಿಯೆಯನ್ನು ತಿಳಿದುಕೊಳ್ಳಲು ಉತ್ತರಾಖಂಡ್ನಲ್ಲಿ ಫೆಬ್ರವರಿಯಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಭಾರತಕ್ಕೆ ಭೇಟಿ ನೀಡಿದ್ದರು. ಅವರು ಉತ್ತರಪ್ರದೇಶ, ಮಣಿಪುರ, ಗೋವಾ ಚುನಾವಣಾ ಪ್ರಕ್ರಿಯೆಗಳನ್ನೂ ಗಮನಿಸಿದ್ದು, ಇದರಿಂದ ಪ್ರಭಾವಿತರಾಗಿದ್ದಾರೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.
ಇವಿಎಂ ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಮತ್ತು ಪ್ರಕ್ರಿಯೆ ತಿಳಿದುಕೊಳ್ಳಲು ಲೆವಿಚೆವ್ ದೆಹಲಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ವ್ಯಾಪಕ ಸಮಾಲೋಚನೆ’ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.
ಭಾರತದ ನಾಯಕರು ಇವಿಎಂ ತಂತ್ರಜ್ಞಾನದಲ್ಲಿ ಅಕ್ರಮ ನಡೆದಿದೆ ಎಂದು ಕಳವಳ ವ್ಯಕ್ತಪಡಿಸುವಾಗಲೇ ರಷ್ಯಾ ಇದರ ಬಗ್ಗೆ ಆಸಕಿ ತೋರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.