ನವದೆಹಲಿ: ವಿಶ್ವಸಂಸ್ಥೆಯ ಖಾಯಂ ಸದಸ್ಯತ್ವ ಪಡೆಯಲು ಬೇಕಾದ ಎಲ್ಲಾ ರಾಜತಾಂತ್ರಿಕ ಪ್ರಯತ್ನಗಳನ್ನೂ ನಡೆಸಲಾಗುತ್ತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ವಿಟೋ ಅಧಿಕಾರದೊಂದಿಗೆ ಖಾಯಂ ಸದಸ್ಯತ್ವ ಪಡೆಯುವ ಎಲ್ಲಾ ಅರ್ಹತೆಗಳೂ ಭಾರತಕ್ಕಿದೆ ಎಂದು ಲೋಕಸಭೆಯಲ್ಲಿ ಅವರು ಹೇಳಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿರುವ ಅಮೆರಿಕಾ, ರಷ್ಯಾ, ಯುಕೆ ಮತ್ತು ಫ್ರಾನ್ಸ್ ರಾಷ್ಟ್ರಗಳು ಭಾರತದ ಪ್ರಯತ್ನಕ್ಕೆ ಬೆಂಬಲ ಸೂಚಿಸಿವೆ. 5ನೇ ರಾಷ್ಟ್ರ ಚೀನಾ ಬಹಿರಂಗವಾಗಿ ಭಾರತದ ಪ್ರಯತ್ನವನ್ನು ವಿರೋಧಿಸಿಲ್ಲ ಎಂದಿದ್ದಾರೆ.
ಈಗ ಅಲ್ಲದಿದ್ದರೂ ಮುಂದೊಂಡು ದಿನ ಖಂಡಿತವಾಗಿಯೂ ಭಾರತ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರವಾಗುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.