ಗುವಾಹಟಿ: ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಜನಸಂಖ್ಯಾ ನಿಯಂತ್ರಣದ ಬಗ್ಗೆ ಅಸ್ಸಾಂ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ವಿಶ್ವವಿದ್ಯಾಲಯದ ಮಟ್ಟದವರೆಗೆ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುವ ಘೋಷಣೆಯನ್ನು ಅದು ಮಾಡಿದೆ.
ಹೆಣ್ಣುಮಕ್ಕಳ ಶಿಕ್ಷಣ ಶುಲ್ಕ, ಸಾರಿಗೆ, ಪುಸ್ತಕ ಮತ್ತು ಹಾಸ್ಟೆಲ್ ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನೂ ಉಚಿತವಾಗಿಸಲು ನಾವು ಬಯಸಿದ್ದೇವೆ. ಈ ಕ್ರಮದಿಂದ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ಪೂರ್ತಿಗೊಳಿಸಲು ಉತ್ತೇಜನ ನೀಡಿದಂತಾಗುತ್ತದೆ ಎಂದು ಅಸ್ಸಾಂ ಶಿಕ್ಷಣ ಸಚಿವ ಹಿಮಂತ್ ಬಿಸ್ವಾಸ್ ಶರ್ಮ ತಿಳಿಸಿದ್ದಾರೆ.
ಅಲ್ಲದೇ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವವರಿಗೆ ಸರ್ಕಾರಿ ಉದ್ಯೋಗವಿಲ್ಲ ಎಂಬ ಘೋಷಣೆಯನ್ನು ಮಾಡಲಾಗಿದೆ. ಅಲ್ಲದೇ ಈ ಎರಡು ಮಕ್ಕಳ ನಿಯಮ ಉದ್ಯೋಗ ಉತ್ತೇಜನ ಯೋಜನಗಳಾದ ಟ್ರ್ಯಾಕ್ಟರ್ ನೀಡುವುದು, ವಸತಿ ನೀಡುವುದು, ಇನ್ನಿತರ ಸರ್ಕಾರಿ ಸೌಲಭ್ಯಗಳ ನೀಡುವಿಕೆಗೂ ಅನ್ವಯಿಸಲಿದೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವವರು ಈ ಸೌಲಭ್ಯಕ್ಕೆ ಅರ್ಹರಾಗಿರುವುದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.