ಇಸ್ಲಾಮಾಬಾದ್: ಬೇಹುಗಾರಿಕೆ ನಡೆಸುತ್ತಿದ್ದ ಆರೋಪಕ್ಕೆ ಗುರಿಯಾಗಿರುವ ಭಾರತದ ಮಾಜಿ ನೌಕಾ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ಥಾನ ಸೇನಾ ನ್ಯಾಯಾಲಯ ಮರಣದಂಡನೆ ಶಿಕ್ಷಯನ್ನು ವಿಧಿಸಿದೆ. ಇದಕ್ಕೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಕುಲಭೂಷಣ್ ಅವರಿಗೆ ಪಾಕಿಸ್ಥಾನ ಮರಣದಂಡನೆ ವಿಧಿಸಿದರೆ ಅದು ಪೂರ್ವಯೋಜಿತ ಕೊಲೆಗೆ ಸಮನವಾಗಿರುತ್ತದೆ ಎಂದು ಭಾರತ ಎಚ್ಚರಿಸಿದೆ.
ಪಾಕ್ನ ಈ ತೀರ್ಪಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಭಾರತ ಪಾಕಿಸ್ಥಾನದ ಹೈಕಮಿಷನರ್ ಅಬ್ದುಲ್ ಬಸಿತ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಕುಲಭೂಷಣ್ ಅವರ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲದೆ ನ್ಯಾಯಸಮ್ಮತವಲ್ಲದ ರೀತಿಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ವಿದೇಶಾಂಗ ವಕ್ತಾರ ಎಸ್.ಜೈಶಂಕರ್ ಆರೋಪಿಸಿದ್ದಾರೆ.
ಕಳೆದ ವರ್ಷದ ಮಾರ್ಚ್ ೩ರಂದು ಪಾಕಿಸ್ಥಾನ ಕುಲಭೂಷಣ್ ಅವರನ್ನು ಬಂಧಿಸಿತ್ತು, ಅವರೊಬ್ಬ ಭಾರತದ ಬೇಹುಗಾರ ಎಂದು ಆರೋಪಿಸಿತ್ತು. ಆದರೆ ಅವರಿಗೂ ಭಾರತ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಅವರು ನೌಕಾ ದಳದ ಮಾಜಿ ಅಧಿಕಾರಿ ಎಂದು ಭಾರತ ಹೇಳಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.