ಹನುಮ ಎಂದ ಕ್ಷಣ ನಮ್ಮ ಮನಸ್ಸಿಗೆ ಬರುವುದು ರಾಮ ಭಕ್ತ, ಸರ್ವ ಶಕ್ತ, ದಾಸ ಶ್ರೇಷ್ಠ ಎಂಬ ಭಗವಂತನ ಸುಂದರ ರೂಪ. ಅನೇಕ ಯುವಕರಿಗಂತು ಆತ ಶಕ್ತಿ ಸಾಹಸ ಪ್ರದಾನ ಮಾಡುವ ದೇವ.
ಸದಾ ರಾಮ ನಾಮದ ಸ್ಮರಣೆಯ ಮಾಡುತ್ತ ಶಿಷ್ಟರನ್ನು ರಕ್ಷಿಸುತ್ತ ದುಷ್ಟಜನರನ್ನು ಶಿಕ್ಷಿಸಿ ಧರ್ಮದ ರಕ್ಷಕನಾಗಿ ನಿಂತಿರುವ ದೇವೋತ್ತಮ ಹನುಮ. ಹನುಮನ ಭಕ್ತಿ ದಾಸ್ಯ ಸರ್ವಶ್ರೇಷ್ಠವಾದುದ್ದು ಎಲ್ಲರಿಗೂ ಅದು ಆದರ್ಶದಾಯಕವು. ಹನುಮಂತ ರಾಮನ ಸೇವೆಗೆ ತನ್ನ ಜೀವವನ್ನೇ ಸಮರ್ಪಿಸಿದ್ದ. ರಾಮನ ದೃಢ ಭಕ್ತನಾಗಿದ್ದ ಹನುಮಂತನನ್ನು ದೇವರ ಪ್ರತಿ ಸ್ಥಿರವಾದ ಭಕ್ತಿಗಾಗಿ ಪೂಜಿಸಲಾಗುತ್ತದೆ.
ಹಿಂದೂ ಧರ್ಮಗ್ರಂಥಗಳಲ್ಲೊಂದಾದ ರಾಮಾಯಣದಲ್ಲಿನ ಪ್ರಮುಖ ಪಾತ್ರಗಳಲ್ಲೊಬ್ಬ, ಹಾಗೂ ಹಿಂದು ದೇವತೆಗಳಲ್ಲಿ ಒಬ್ಬ. ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.
ಹನುಮಂತ ಕಿಷ್ಕಿಂಧೆಯಲ್ಲಿ ಸುಗ್ರೀವನ ಜೊತೆಯಲ್ಲಿರುತ್ತಾನೆ. ಸೀತೆಯನ್ನು ಹುಡುಕಿಕೊಂಡು ರಾಮ ಕಿಷ್ಕಿಂಧೆಗೆ ಬಂದಾಗ ಹನುಮಂತನಿಗೆ ರಾಮನೊಡನೆ ಭೇಟಿಯಾಗುತ್ತದೆ. ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.
ಮಾರುತಿ, ಪವನಪುತ್ರ, ಸುಂದರ, ವಾಯುಪುತ್ರ, ರಾಮಪ್ರಿಯ, ಹನುಮ, ಅಂಜನಾತನಯ, ಆಂಜನೇಯ, ವಾನರ ಶ್ರೇಷ್ಠ. ಕೇಸರಿ ನಂದನ, ಹನುಮಂತ, ರಾಮದೂತ, ದಾಸರಲ್ಲಿ ಶ್ರೇಷ್ಟ. ಭಕ್ತ ಅನಜನೆಯ ಮಾರುತಿ, ಪವನಪುತ್ರ, ಸು೦ದರ, ವಾಯುಪುತ್ರ, ರಾಮಪ್ರಿಯ, ಹನುಮ೦ತ, ಆಂಜನೇಯ, ವಾನರಶ್ರೇಷ್ಠ, ಕೇಸರಿ ನ೦ದನ, ಸೂರ್ಯೋದಯ ಆದ ಸಮಯದಲ್ಲಿ ಶ್ರೀರಾಮಚಂದ್ರನ ಪರಮ ಭಕ್ತನಾದ ಹನಮಂತನು ಅವತಾರ ಮಾಡಿದ ದಿನ. ಈ ದಿನ ಬಹಳ ಮಹತ್ವದ್ದು.
ಹನುಮಂತನ ತಂದೆ ಕೇಸರಿ ಎಂಬ ಶ್ರೇಷ್ಠ ಕಪಿ, ತಾಯಿ ಅಂಜನಾದೇವಿ, ಒಳ್ಳೆಯ ಸಾಧ್ವಿ. ಅವಳು ಋಷಿಗಳ ಅನುಮತಿಯಿಂದ ಇವನನ್ನು ಪಡೆದಳು. ಆದ್ದರಿಂದ ಇವನಿಗೆ ಆಂಜನೇಯ ಎಂದು ಕರೆಯುವುದುಂಟು. ಹನುಮಂತ ದೇವರ ಸ್ಮರಣೆ ನಮಗೆಲ್ಲ ಒಂದು ವಿಶೇಷವಾದ ಶಕ್ತಿಯನ್ನು ತುಂಬಿಕೊಂಡ ಹಾಗೆ, ಆ ರಾಮದೂತನನ್ನು ನೆನೆಯುವ ದಿನವೇ ಹನುಮ ಜಯಂತಿ. ತ್ರೇತಾಯುಗದಲ್ಲಿ ರಾಮಭಕ್ತನಾಗಿ ಅವತಾರ ಮಾಡಿದ ಅವನ ಅನೇಕ ವಿಧವಾದ ಶಕ್ತಿಯನ್ನು ನಾವು ರಾಮಾಯಣದಲ್ಲಿ ತಿಳಿದುಕೊಳ್ಳಬಹುದು. ನಮ್ಮ ಜೀವನದಲ್ಲಿ ಎಲ್ಲ ಅವಸ್ಥೆಯಲ್ಲಿಯೂ ಅವನನ್ನು ಸ್ಮರಿಸುವುದು ಅವಶ್ಯಕ. ಶಾಸ್ತ್ರಗಳಲ್ಲಿ ಹನುಮಂತನ ಸ್ಮರಣೆಯಿಂದಾಗುವ ಲಾಭಗಳ ಬಗ್ಗೆ ಅನೇಕ ಬಾರಿ ಉಲ್ಲೇಖ ಇದೆ. ಅದರಲ್ಲಿ ಕೆಲವು ಈ ರೀತಿಯಾಗಿವೆ:
ಉತ್ತಮ ಬುದ್ಧಿವಂತನಾಗುವುದಕ್ಕೆ, ಶಾರೀರಿಕ ಬಲ ಮತ್ತು ಮಾನಸಿಕ ಬಲ ಇವೆರಡೂ ಬೇಕು, ಅಮ ಸಂಪಾದನೆ ಮಾಡುವುದಕ್ಕೆ, ನಾವು ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರಕುವುದಕ್ಕಾಗಿ ಮತ್ತು ಈಗಿನ ಒಂದು ದಿನದ ಪ್ರತಿ ಹಂತ ಹಂತದಲ್ಲೂ ನಮ್ಮಲ್ಲಿ ಧೈರ್ಯ ಕಡಿಮೆಯಾಗುತ್ತಲಿದೆ (ಅದಕ್ಕೆ ಕಾರಣಗಳು ಅನೇಕ, ಅದನ್ನು ಇಲ್ಲಿ ಮೆಲಕು ಹಾಕುವುದು ಬೇಡ) – ಆ ಧೈರ್ಯ ಕುಂದದೆ ಇರುವುದಕ್ಕೆ, ಭಯರಹಿತವಾದ ಜೀವನವನ್ನು ಸಾಧಿಸುವುದಕ್ಕೆ, ನಮ್ಮ ನಮ್ಮ ಧರ್ಮವನ್ನು ಆಚರಿಸದೆ ಇರುವುದಕ್ಕೆ ಕಾರಣವಾದ ನಮ್ಮಲ್ಲಿರುವ ಆಲಸ್ಯತನವು – ಅದನ್ನು ದೂರ ಮಾಡುವುದಕ್ಕೆ, ಮಾತು ಎಲ್ಲರಿಗೂ ಬೇಕು, ಅದಿಲ್ಲದೆ ಜೀವನ ಬಹಳ ಕಷ್ಟ – ಅದರ ಸಂಪಾದನೆಗೂ, ರಾಮನ ಭಕ್ತನಾದ ಹನುಮಂತ, ಆಂಜನೇಯನ ಸ್ಮರಣೆ, ಪ್ರಾರ್ಥನೆ ಇದು ಅತ್ಯಾವಶ್ಯಕ.
ಜೈ ಹನುಮಾನ್!
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.