ನವದೆಹಲಿ: 18 ತಿಂಗಳಲ್ಲಿ ತಲಾಖ್ ಪದ್ಧತಿಯನ್ನು ಕೊನೆಗಾಣಿಸಲಿದ್ದು, ಈ ವಿಷಯದಲ್ಲಿ ಸರ್ಕಾರದ ಮಧ್ಯಸ್ಥಿಕೆಯ ಅವಶ್ಯಕತೆ ಇಲ್ಲ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಬಹುವಿವಾದಿತ ತ್ರಿವಳಿ ತಲಾಖ್ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್( ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಸಲ್ಲಿಸಿರುವುದನ್ನು ವಿರೋಧಿಸಿದ ಮಂಡಳಿ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.
ತ್ರಿವಳಿ ತಲಾಖ್ ಪದ್ಧತಿಯಿಂದ ಅನೇಕ ಮುಸ್ಲಿಂ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಲಿಂಗ ತಾರತಮ್ಯವಿಲ್ಲದೇ, ಸಮಾನತೆಯನ್ನು ಸಾಧಿಸುವುದೇ ನಮ್ಮ ಗುರಿಯಾಗಿದ್ದು ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಮಂಡಳಿ ತಿಳಿಸಿದೆ.
ಒಂದೂವರೆ ವರ್ಷದಲ್ಲಿ ಈ ಪದ್ಧತಿಯನ್ನು ಹೋಗಲಾಡಿಸಲು ನಿರ್ಧರಿಸಿಯಾಗಿದೆ ಎಂದು ಮಂಡಳಿಯ ಉಪಾಧ್ಯಕ್ಷ ಡಾ.ಸಯೀದ್ ಸಾದಿಕ್ ಹೇಳಿರುವುದಾಗಿ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಉಲ್ಲೇಖಿಸಲಾಗಿದೆ.
ಶರಿಯತ್ ಮತ್ತು ತ್ರಿವಳಿ ತಲಾಖ್ ನ್ನು ಬೆಂಬಲಿಸಿ ದೇಶಾದ್ಯಂತ ಮುಸ್ಲಿಂ ಮಹಿಳೆಯರಿಂದ 3.50 ಕೋಟಿ ಅರ್ಜಿಗಳು ಬಂದಿವೆ ಎಂದು ಮಂಡಳಿ ತಿಳಿಸಿದ್ದು, ತ್ರಿವಳಿ ತಲಾಖ್ ನ್ನು ವಿರೋಧಿಸುವ ಮುಸ್ಲಿಂ ಮಹಿಳೆಯರ ಸಂಖ್ಯೆ ಕಡಿಮೆಯಿದೆ ಎಂದು ಮಂಡಳಿಯ ಮಹಿಳಾ ಘಟಕದ ಮುಖ್ಯ ಸಂಘಟಕಿ ಆಸ್ಮಾ ಜೊಹ್ರಾ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.