ಲಕ್ನೋ: ಬಡ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ನಿರ್ಧರಿಸಿದೆ.
ಸಾಮೂಹಿಕ ವಿವಾಹಕ್ಕೆ ಒಳಗಾಗುವ ಹೆಣ್ಣು ಮಕ್ಕಳಿಗೆ 20 ಸಾವಿರ ಧನ ಸಹಾಯವನ್ನೂ ನೀಡಲಾಗುತ್ತದೆ. ವಿವಾಹಕ್ಕೆ ತಗಲುವ ಎಲ್ಲಾ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ.
ಸಿಖ್ ಮತ್ತು ಕ್ರಿಶ್ಚಿಯನ್ ಸಮುದಾಯದವರನ್ನೂ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಒಳಪಡಿಸಲಾಗುತ್ತದೆ.
ಸಿಎಂ ಯೋಗಿ ಈ ಕಾರ್ಯಕ್ರಮ ಆಯೋಜನೆಗೆ ಈಗಾಗಲೇ ತಮ್ಮ ಸಮ್ಮತಿಯನ್ನು ನೀಡಿದ್ದಾರೆ, ರಾಜ್ಯ ಸರ್ಕಾರದ ೧೦೦ ದಿನಗಳ ಕಾರ್ಯಕ್ರಗಳಲ್ಲಿ ಇದನ್ನೂ ಸೇರಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮೋಹ್ಸಿನ್ ರಾಜಾ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.