ಮಂಗಳೂರು : ಬಂಟ್ವಾಳ -ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಮಣಿಹಳ್ಳ, ನಿಡಿಗಲ್ ಮತ್ತು ಚಾರ್ಮಾಡಿಯಲ್ಲಿ ಒಟ್ಟು 3 ಸೇತುವೆ ನಿರ್ಮಾಣಕ್ಕೆ ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯಿಂದ 19 ಕೋಟಿ ರೂ.ಮಂಜೂರಾಗಿದೆ ಎಂದು ದ.ಕ.ಸಂಸದ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬಂಟ್ವಾಳ -ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿಗೆ ಅನುದಾನ ಕೋರಿ ಕೇಂದ್ರ ಭೂ ಸಾರಿಗೆ ಸಚಿವರ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಈ ಹೆದ್ದಾರಿ 10 ಮೀ.ಅಗಲಗೊಳಿಸಲು 300 ಕೋಟಿ ರೂ. ಪ್ರಸ್ತಾವನೆ ಈಗಾಗಲೇ ಸಲ್ಲಿಕೆಯಾಗಿದೆ. ಎರಡು ಹಂತದ ಸರ್ವೆ ಹಾಗೂ ಸಮಗ್ರ ಯೋಜನಾ ವರದಿ ಸಿದ್ದ ಪಡಿಸಲಾಗುತ್ತಿದೆ. ಕೇಂದ್ರ ಸಚಿವರು ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದ್ದಾರೆ. ಇದೀಗ 3 ಸೇತುವೆಗಳ ನಿರ್ಮಾಣಕ್ಕೆ 19 ಕೋಟಿ ರೂ.ಬಿಡುಗಡೆಯಾಗಲಿದ್ದು, ಕ್ಷೇತ್ರದ ಜನತೆಯ ಪರವಾಗಿ ಸಚಿವ ಗಡ್ಕರಿ ಅವರನ್ನು ಅಭಿನಂದಿಸುವುದಾಗಿ ಸಂಸದರ ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.