ಧಾರವಾಡ: ಬರಗಾಲದಿಂದ ಜನ ಬಳಲುತ್ತಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡದೇ ರಾಜಕಾರಣ ಮಾಡುತ್ತಿದೆ ಎಂದು ರೈತ ಸೇನಾ ಸಂಘದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಅವರು, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ರೈತರ ಸಾಲವನ್ನು ಮನ್ನಾ ಮಾಡಲಾಗಿದೆ. ತೆಲಂಗಾಣದಲ್ಲಿ ರೈತರಿಗೆ ಉಚಿತ ಗೊಬ್ಬರ ಮತ್ತು ಬೀಜ ವಿತರಿಸಲಾಗಿದೆ. ಆದರೆ ನಮ್ಮ ರಾಜ್ಯ ಕೇಂದ್ರದತ್ತ ಬೊಟ್ಟು ಮಾಡಿ ನುಣುಚಿಕೊಳ್ಳುತ್ತಿದೆ ಎಂದರು.
ಮಹದಾಯಿ ನಿರ್ಲಕ್ಷ್ಯ
ಮಹದಾಯಿ ವಿವಾದವನ್ನು ಬಗೆಹರಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ತೋರುತ್ತಿವೆ ಎಂದು ಆರೋಪಿಸಿದ ಅವರು, ಈ ಕುರಿತು ಅಂತಿಮ ನಿರ್ಣಯ ಕೈಗೊಳ್ಳದೇ ಹೋದರೆ ಜನಪ್ರತಿನಿಧಿಗಳ ವಿರುದ್ಧ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದಿದ್ದಾರೆ.
ಮಹದಾಯಿ ವ್ಯಾಪ್ತಿಯಲ್ಲಿ ಬರುವ ೪ ಜಿಲ್ಲೆಯ ಸಂಸದರು ನದಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಇದು ಬದಲಾಗಬೇಕು. ಎಲ್ಲರೂ ಇಚ್ಛಾಶಕ್ತಿ ಪ್ರದರ್ಶಿಸುವ ಅವಶ್ಯಕತೆ ಇದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.