ನವದೆಹಲಿ: ತ್ರಿವಳಿ ತಲಾಖ್ ವಿಷಯವನ್ನು ಬಿಜೆಪಿ ಕೋರ್ಟ್ ಅಂಗಳಕ್ಕೆ ತರುವುದು ಸೂಕ್ತವಲ್ಲ, ಮುಸ್ಲಿಂರೇ ತಮ್ಮ ಸಮಸ್ಯೆಯನ್ನು ತಾವೇ ಬಗೆಹರಿಸಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಬಿಜೆಪಿಗೆ ಸಲಹೆ ನೀಡಿದ್ದಾರೆ.
ಅನವಶ್ಯಕವಾಗಿ ಬಿಜೆಪಿ ತ್ರಿವಳಿ ತಲಾಖ್ ವಿಷಯದಲ್ಲಿ ಯಾಕೆ ಆಸಕ್ತಿ ತೋರಿಸುತ್ತಿದೆ? ಯಾರೂ ಈ ವಿಷಯದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ. ಅವರ ಸಮಸ್ಯೆಗೆ ಅವರೇ ಪರಿಹಾರ ಕಂಡುಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.
ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸುವ ಕೆಲಸವಾಗಬೇಕಿದೆ. ಈ ಸಮಸ್ಯೆಗೆ ನಾವು ಜಿಲ್ಲಾ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳುತ್ತೇವೆ. ನವಭಾರತದ ನಿರ್ಮಾಣಕ್ಕೆ ನೂತನ ಸೂತ್ರಗಳನ್ನು ಅನುಸರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಒಡಿಶಾದಲ್ಲಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.