ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉದ್ರಿಕ್ತ ಗುಂಪುಗಳನ್ನು ನಿಯಂತ್ರಿಸಲು ಪೆಲ್ಲೆಟ್ ಗನ್ಗಳ ಬದಲು ಪ್ಲಾಸ್ಟಿಕ್ ಬುಲ್ಲೆಟ್ಗಳನ್ನು ಬಳಸಲು ಸೇನೆ ನಿರ್ಧರಿಸಿದೆ.
ಹಿಂಸಾಚಾರಗಳು ಮುಗಿಲೇಳುವ ವೇಳೆ ಉದ್ರಿಕ್ತ ಜನರನ್ನು ನಿಯಂತ್ರಿಸಲು ಪ್ಲಾಸ್ಟಿಕ್ ಬುಲ್ಲೆಟ್ಗಳನ್ನು ಬಳಸಿ ಪರಿಸ್ಥಿತಿ ವಿಕೋಪಕ್ಕೆ ತೆರಳಿ ಅನಿವಾರ್ಯ ಎನಿಸಿದರೆ ಮಾತ್ರ ಪೆಲ್ಲೆಟ್ ಗನ್ಗಳನ್ನು ಬಳಸಿ ಎಂದು ಕೇಂದ್ರ ಗೃಹ ಇಲಾಖೆ ಸೇನೆಗೆ ಸೂಚನೆ ನೀಡಿದೆ.
ಪ್ರತಿಭಟನಾಕಾರರೊಂದಿಗೆ ನಡೆಯುವ ಹೋರಾಟದಲ್ಲಿ ಸಂಭವಿಸುವ ಹೆಚ್ಚಿನ ಹಾನಿಯನ್ನು ತಡೆಯುವ ಸಲುವಾಗಿ ಪ್ಲಾಸ್ಟಿಕ್ ಬುಲ್ಲೆಟ್ಗಳನ್ನು ಬಳಸಲು ನಿರ್ಧರಿಸಲಾಗಿದೆ.
ಪೆಲ್ಲೆಟ್ ಗನ್ಗಳಿಂದ ಜನರಿಗೆ ಹೆಚ್ಚಿನ ಅಪಾಯಗಳು ಉಂಟಾಗುತ್ತಿದ್ದು, ಇದಕ್ಕೆ ಟೀಕೆಗಳೂ ವ್ಯಕ್ತವಾಗುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.