ನವದೆಹಲಿ: ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಲು ಹೊರಟಿರುವ ಕೇಂದ್ರ ಸರ್ಕಾರ, ವಿಐಪಿಗಳ, ಸಚಿವರುಗಳು, ಶಾಸಕರ ಕಾರಿನ ಮೇಲಿರುವ ಕೆಂಪು ದೀಪಗಳನ್ನು ತೆಗೆದುಹಾಕುವಂತೆ ಬುಧವಾರ ಆದೇಶ ಹೊರಡಿಸಿದೆ.
ಮೇ1ರಿಂದ ಈ ನೂತನ ನಿರ್ದೇಶನ ಜಾರಿಗೆ ಬರಲಿದೆ. ರಾಷ್ಟ್ರಪತಿಗಳು, ಉಪರಾಷ್ಟ್ರಪತಿ ಪ್ರಧಾನಿ, ಮುಖ್ಯನ್ಯಾಯಮೂರ್ತಿ, ಲೋಕಸಭಾ ಸ್ಪೀಕರ್ ಅವರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಇಂದು ನಡೆಸಿದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು ಎನ್ನಲಾಗಿದೆ.
ಈಗಾಗಲೇ ದೆಹಲಿಯ ಎಎಪಿ ಸರ್ಕಾರ, ಪಂಜಾಬ್ನ ಅಮರೀಂದರ್ ಸಿಂಗ್ ಸರ್ಕಾರ, ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಸಚಿವರುಗಳು ಕೆಂಪು ದೀಪ ಬಳಸುವುದಕ್ಕೆ ನಿಷೇಧ ಹೇರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.