ತುಮಕೂರು: ನಡೆದಾಡುವ ದೇವರು ಎಂದೇ ಕರೆಯಲ್ಪಡುವ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಗವಾನ್ ಮಹಾವೀರ ಶಾಂತಿ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಮಠದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಏರ್ಪಡಿಸಿದ್ದ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಮೀಜಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು 10 ಲಕ್ಷ ರೂ. ನಗದು, ಭಗವಾನ್ ಮಹಾವೀರ ಪುತ್ಥಳಿ ಮತ್ತು ಪ್ರಶಸ್ತಿ ಫಲಕ ಹೊಂದಿದೆ. ಈ ವರ್ಷದಿಂದ ರಾಜ್ಯ ಸರ್ಕಾರವು ಶ್ರೀ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಯನ್ನು ನೀಡಲು ಪ್ರಾರಂಭಿಸಿದ್ದು, ಮೊದಲ ಬಾರಿಗೆ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ನೀಡಿದೆ.
ಶ್ರೀಗಳು ನೀಡುತ್ತಿರುವ ಗುಣಮಟ್ಟದ ಶಿಕ್ಷಣ, ಬಡವರ ಏಳಿಗೆಗೆ ಅವರು ನೀಡಿದ ಕೊಡುಗೆ, ಶಾಂತಿಯ ಪ್ರತಿಪಾದನೆಯನ್ನು ಪರಿಗಣಿಸಿ ಸ್ವಾಮೀಜಿಗಳಿಗೆ ರಾಜ್ಯ ಸರ್ಕಾರ ಈ ಪುರಸ್ಕಾರವನ್ನು ನೀಡಿದೆ.
ಈ ಪುರಸ್ಕಾರ ಮಠ ಮಾಡಿದ ಉತ್ತಮ ಕಾರ್ಯಕ್ಕೆ ಸಿಕ್ಕ ಮನ್ನಣೆ ಎಂದಿರುವ ಶ್ರೀಗಳು ಭಗವಾನ್ ಮಹಾವೀರನ ಬೋಧನೆಗಳನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿದರು.
ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯನ್ನು ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ನೀಡಬೇಕೆಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.