ಉಧಮ್ಸಿಂಗ್ ನಗರ (ಉತ್ತರಾಖಂಡ್): ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸದಿದ್ದಲ್ಲಿ ಹಿಂದೂ ಧರ್ಮಕ್ಕೆ ಮತಾಂತರ ಹೊಂದುವುದು ಅನಿವಾರ್ಯವಾಗುತ್ತದೆ ಎಂದು ತಲಾಖ್ ಸಂತ್ರಸ್ಥೆಯ ಸೋದರಿಯೊಬ್ಬರು ಎಚ್ಚರಿಕೆ ನೀಡಿದ್ದಾರೆ.
ತನ್ನ ಸಹೋದರಿಗೆ ತಲಾಖ್ ನೀಡಿದ್ದಕ್ಕಾಗಿ ಆಕ್ರೋಶಗೊಂಡು ಪ್ರತಿಕ್ರಿಯಿಸಿರುವ ಮುಸ್ಲಿಂ ಮಹಿಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ವಿಶೇಷವಾಗಿ ಮುಸ್ಲಿಂ ಮಹಿಳೆಯರ ಬಗ್ಗೆ ಅವರ ನಡೆ ಸ್ವಾಗತಾರ್ಹ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನೀಗ ಯುವತಿ. ನನ್ನ ಇಡೀ ಜೀವನವನ್ನು ಭಯದಲ್ಲೇ ಯಾಕೆ ಕಳೆಯಬೇಕು? ಎಂದು ಪ್ರಶ್ನಿಸಿರುವ ಅವರು, ಕೇವಲ ಮೂರು ಪದಗಳಲ್ಲಿ ನನ್ನ ಜೀವನ ಹಾಳು ಮಾಡಿಕೊಳ್ಳುವುದಕ್ಕಿಂತ ಹಿಂದೂ ಧರ್ಮಕ್ಕೆ ಮತಾಂತರವಾಗುವುದೇ ಲೇಸು ಎಂದು ಎಂದು ಅವರು ಹೇಳಿದ್ದಾರೆ.
ತ್ರಿವಳಿ ತಲಾಖ್ ಸಂತ್ರಸ್ಥೆಯರು ಗೌರವ ಪೂರ್ಣ ಬದುಕು ನಡೆಸುವ ಆಸಕ್ತಿಯಿದ್ದರೆ ಹಿಂದೂ ಧರ್ಮಕ್ಕೆ ಸೇರ್ಪಡೆಗೊಳ್ಳಿ ಎಂದು ಹಿಂದೂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಡಾ.ಪೂಜಾ ಶಕುನ್ ಅವರು ಕಳೆದ ವಾರ ವಿನಂತಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.