ನವದೆಹಲಿ: ನಾನು ರಾಮ ಜನ್ಮಭೂಮಿ ಚಳುವಳಿಯ ಹೆಮ್ಮೆಯ ಭಾಗಿದಾರಳು ಎಂದು ಕೇಂದ್ರ ಸಚಿವೆ ಉಮಾಭಾರತಿ ಹೇಳಿದ್ದಾರೆ.
ಆಯೋಧ್ಯ-ಬಾಬ್ರಿ ಮಸೀದಿ ಪ್ರಕರಣದಲ್ಲಿ ಕ್ರಿಮಿನಲ್ ತಂತ್ರ ರೂಪಿಸಿದ ಆರೋಪದ ಮೇರೆಗೆ ಉಮಾಭಾರತಿ ವಿರುದ್ಧ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ಅವರ ರಾಜೀನಾಮೆ ಕೇಳುತ್ತಿವೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉಮಾಭಾರತಿ, ’ರಾಮ ಜನ್ಮಭೂಮಿ ಚಳುವಳಿಯಲ್ಲಿ ಭಾಗಿಯಾದ ಬಗ್ಗೆ ನನಗೆ ಹೆಮ್ಮೆ ಇದೆ. ನನಗೆ ಅಯೋಧ್ಯಾ ಕೇವಲ ರಾಜಕೀಯ ವಿಷಯವಲ್ಲ, ನಂಬಿಕೆಯ ವಿಷಯ’ ಎಂದಿದ್ದಾರೆ.
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಅವರು, ‘1984ರ ಸಿಖ್ ದಂಗೆ ನಡೆಸಿರುವ ಮತ್ತು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿರುವ ಕಾಂಗ್ರೆಸ್ಗೆ ನನ್ನ ರಾಜೀನಾಮೆ ಕೇಳುವ ಯಾವ ಹಕ್ಕೂ ಇಲ್ಲ’ ಎಂದಿದ್ದಾರೆ.
ರಾಮ ಜನ್ಮಭೂಮಿ ಪ್ರಕರಣದಲ್ಲಿ ಆರೋಪಕ್ಕೀಡಾಗಿರುವ ಬಗ್ಗೆ ಯಾವುದೇ ಪಶ್ಚಾತಾಪವಿಲ್ಲ, ದೇಗುಲ ನಿರ್ಮಾಣ ಆಗಿಯೇ ಆಗುತ್ತದೆ. ಯಾವ ಪ್ರಶ್ನೆಗಳನ್ನು ಎದುರಿಸಲು ನಾನು ಸಿದ್ಧ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.