ಪುರಿ: ವಿಶೇಷವಾಗಿ ಬಂಗಾಲಿಗಳಿಗೆ ಪುರಿ ಜಗನ್ನಾಥನೆಂದರೆ ಅತೀವ ಇಷ್ಟ, ಅಂತೆಯೇ ನನಗೂ ಜಗನ್ನಾಥನ ಮೇಲೆ ಅತೀವ ನಂಬಿಕೆ ಇದೆ ಎಂದು ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಓಡಿಶಾದಲ್ಲಿನ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಹಿಂದೂ ಧರ್ಮ ಎಲ್ಲರನ್ನೂ ಒಳಗೊಳ್ಳುವ ಅಪರೂಪದ ಸಿದ್ಧಾಂತ ಎಂದಿದ್ದಾರೆ.
ಹಿಂದೂಗಳು ಗೋಮಾಂಸ ಭಕ್ಷಣೆ ಮಾಡಬಹುದು ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ದೇವಾಲಯದ ಕೆಲ ಅರ್ಚಕರೂ ಬ್ಯಾನರ್ಜಿಯವರಿಗೆ ದೇವಾಲಯದ ಒಳಗೆ ಪ್ರವೇಶಿಸಲು ವಿರೋಧಿಸಿದರು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.