ನವದೆಹಲಿ: ನಿಗದಿತ ಸಮಯಕ್ಕಿಂತ ಕಾರ್ಯಕ್ರಮ ತಡವಾಗಿ ಆರಂಭವಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಿವಿಲ್ ಸರ್ವೆಂಟ್ಗಳ ಸಮಾರಂಭ ನವದೆಹಲಿಯಲ್ಲಿ ಬೆಳಿಗ್ಗೆ 9.45ಕ್ಕೆ ಆರಂಭವಾಗಬೇಕಿತ್ತು. ಇದರಲ್ಲಿ ಮುಖ್ಯ ಅತಿಥಿಗಳಾಗಿದ್ದ ರಾಜನಾಥ್ ಸಿಂಗ್ 5 ನಿಮಿಷ ಮೊದಲೇ ಸ್ಥಳಕ್ಕಾಗಮಿಸಿದ್ದರು. ಆದರೆ ಕಾರ್ಯಕ್ರಮ 9.47ಕ್ಕೆ ಆರಂಭವಾಯಿತು.
ಇದರಿಂದ ಅಸಮಾಧಾನಗೊಂಡ ಸಿಂಗ್, ಆಯೋಜನೆ ಜವಾಬ್ದಾರಿ ಹೊತ್ತಿದ್ದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಸಮಯಪ್ರಜ್ಞೆಯನ್ನು ಪಾಲಿಸುವಂತೆ ಬುದ್ಧಿಮಾತು ಹೇಳಿದರು.
ಸಿವಿಲ್ ಸರ್ವಿಸ್ನ್ನು ಉಕ್ಕಿನ ಕವಚ ಎಂಬ ಸರ್ದಾರ್ ವಲ್ಲಭಾಭಾಯ್ ಅವರ ಮಾತನ್ನು ಈ ವೇಳೆ ಜ್ಞಾಪಿಸಿದ ಅವರು, ಉಕ್ಕಿನ ಕವಚ ಇದೀಗ ದುರ್ಬಲಗೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಐಎಎಸ್ ಅಧಿಕಾರಿಗಳು, ಪ್ರಧಾನಿ ಸಚಿವಾಲಯದ ಅಧಿಕಾರಿಗಳು, ವಿವಿಧ ಸಚಿವಾಲಯಗಳ ಅಧಿಕಾರಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.