ಲಾಥೂರ್: ಮಹಾರಾಷ್ಟ್ರದ ಲಾಥೂರ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇಂದು ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 38 ಸ್ಥಾನ ಗೆದ್ದುಕೊಂಡಿದೆ.
2012ರಲ್ಲಿ ಒಂದೇ ಒಂದು ಸ್ಥಾನ ಗೆಲ್ಲದ ಬಿಜೆಪಿ ಈ ಬಾರಿ 38ನ ಗೆದ್ದಿದ್ದು, ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.
2012ರಲ್ಲಿ 19 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 31 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ, ಎನ್ಸಿಪಿ 1 ಸ್ಥಾನ ಪಡೆದುಕೊಂಡಿದೆ.
ಲಾಥೂರ್ ಕಾರ್ಪೋರೇಶನ್ನಲ್ಲಿ 70 ಸ್ಥಾನಗಳಿವೆ. ಬುಧವಾರ ಚುನಾವಣೆ ನಡೆದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.