ಲಕ್ನೋ: ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಅಚ್ಚೊತ್ತುವ ಸಲುವಾಗಿ ಶೈಕ್ಷಣಿಕ ಪಠ್ಯಗಳಲ್ಲಿ ಸಂಸ್ಕೃತವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಲಕ್ನೋದ ಕಾನ್ಪುರ ರೋಡ್ ಬ್ರಾಂಚ್ನಲ್ಲಿನ ಜೈಪುರಿಯ ಸ್ಕೂಲ್ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಇಂಗ್ಲೀಷ್ ಜ್ಞಾನ ಅತ್ಯಗತ್ಯ ಆದರೆ ನಮ್ಮ ಮಕ್ಕಳನ್ನು ಇಂಗ್ಲೀಷ್ ವ್ಯಕ್ತಿಯನ್ನಾಗಿಸಬೇಡಿ. ಸಂಸ್ಕೃತ ಮಾತ್ರ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಸಿಕೊಡಬಲ್ಲುದು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
‘ಕೆಳಗಿನ ತರಗತಿಯಿಂದಲೇ ಶಾಲೆಗಳಲ್ಲಿ ಸಂಸ್ಕೃತವನ್ನು ಕಡ್ಡಾಯಗೊಳಿಸಬೇಕು. ಪ್ರತಿನಿತ್ಯ ಅರ್ಧಗಂಟೆಯಾದರೂ ಸಂಸ್ಕೃತ ಕ್ಲಾಸ್ ಕಡ್ಡಾಯಗೊಳ್ಳಬೇಕು’ ಎಂದು ಅವರು ಪ್ರತಿಪಾದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.