ಮಂಗಳೂರು: 1 ಸಾವಿರ ಕೋಟಿ ವೆಚ್ಚದಲ್ಲಿ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಬಯಸುವುದಾಗಿ ಕೇಂದ್ರ ರಸಗೊಬ್ಬರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ಶನಿವಾರ ಮಾತೃಭೂಮಿ ಸೌಹಾರ್ದ ಸಹಕಾರಿ ನಿಯಮಿತ ಆಯೋಜಿಸಿದ್ದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜದ 5 ಜನರಿಕ್ ಸೆಂಟರ್ ಮತ್ತು ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಮಂಗಳೂರು ಉತ್ತಮ ಸ್ಥಳವಾಗಿದ್ದು, 3 ಸಾವಿರ ಜನರಿಗೆ ಇದರಿಂದ ಉದ್ಯೋಗ ಸಿಗಲಿದೆ ಎಂದರು.
ಅಲ್ಲದೇ ಮಂಗಳೂರಿನಲ್ಲಿ ಇದರ ಸ್ಥಾಪನೆಗಾಗಿ ಎಂಆರ್ಪಿಎಲ್, ಎಂಸಿಎಫ್ಗಳೊಂದಿಗೆ ಮಾತನಾಡಿ ಮತ್ತು ರಾಜ್ಯ ಸರ್ಕಾರದ ಮೇಲೂ ಒತ್ತಡ ತನ್ನಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅವರು ಮನವಿ ಮಾಡಿದರು.
ಭಾರತ ಔಷಧಿಗಳ ಜಾಗತಿಕ ಶಕ್ತಿಯಾಗಿದ್ದು, ಜಾಗತಿಕವಾಗಿ ತೆಗೆದುಕೊಳ್ಳಲಾಗುವ 5 ಔಷಧಿಗಳಲ್ಲಿ 2 ಔಷಧಿ ಭಾರತದ್ದಾಗಿರುತ್ತದೆ. 216 ದೇಶಗಳಿಗೆ ಭಾರತ ಒಂದು ಲಕ್ಷ ಔಷಧಿಗಳನ್ನು ಪೂರೈಕೆ ಮಾಡುತ್ತದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.