ನವದೆಹಲಿ : ಜಿಎಸ್ಟಿ ಮಸೂದೆಯು ದೇಶದ ವಿಕೇಂದ್ರಿಕರಣದ ವ್ಯವಸ್ಥೆಯ ಶ್ರೇಷ್ಠ ಸಂಕೇತವಾಗಿ ಇತಿಹಾಸದಲ್ಲಿ ನೆಲೆಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
2014-15, 2016-17 ನೇ ಸಾಲಿನಲ್ಲಿ ರಾಜ್ಯಗಳಿಗೆ ಕೇಂದ್ರ ನೀಡುತ್ತಿರುವ ಅನುದಾನಗಳಲ್ಲಿ ಶೇ. 40 ರಷ್ಟು ಏರಿಕೆಯಾಗಿದೆ ಎಂದರು.
ಎಲ್ಲಾ ರಾಜಕೀಯ ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಜಿಎಸ್ಟಿ ಮಸೂದೆ ಅಂಗೀಕಾರಕ್ಕೆ ಸಹಕರಿಸಿದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಅವರು ಅಭಿನಂದನೆಯನ್ನು ಸಲ್ಲಿಸಿದರು.
ಜಿಎಸ್ಟಿಯು ‘ಒಂದು ರಾಷ್ಟ್ರ, ಒಂದು ಆಶಯ, ಒಂದು ಗುರಿ’ಯ ಪ್ರತಿಬಿಂಬವಾಗಿದೆ ಎಂದರು.
ನೀತಿ ಆಯೋಗದ ಈ ಸಭೆಯಲ್ಲಿ ಕರ್ನಾಟಕ, ಬಿಹಾರ, ತ್ರಿಪುರ, ಪಂಜಾಬ್ಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.