ಅಮೃತ್ಸರ : ಪಂಜಾಬ್ನ ಸಚಿವ, ಮಾಜಿ ಕ್ರಿಕೆಟಿಗರಾಗಿರುವ ನವ್ಜೋತ್ ಸಿಂಗ್ ಸಿಧು ಅವರು ತಮ್ಮ ಸ್ವಂತ ಕಿಸೆಯಿಂದ ರೈತರಿಗೆ 24 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಅವರ ಸ್ವಂತ ಕ್ಷೇತ್ರ ಆಮೃತಸರದ ಗ್ರಾಮವೊಂದರಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ 300 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಗೋಧಿ ಬೆಳೆ ಸುಟ್ಟು ಭಸ್ಮವಾಗಿ ಹೋಗಿವೆ.
ಈ ವೇಳೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಸಿಧು, ತಮ್ಮ ಸ್ವಂತ 24 ಲಕ್ಷ ರೂ.ಗಳನ್ನು ನಷ್ಟಕ್ಕೀಡಾದ ರೈತರಿಗೆ ಪರಿಹಾರ ರೂಪದಲ್ಲಿ ಕೊಡಲು ಮುಂದಾಗಿದ್ದಾರೆ.
ಸಿಧು ಅವರ ಈ ಕಾರ್ಯಕ್ಕೆ ಭಾರೀ ಶ್ಲಾಘನೆಗಳು ವ್ಯಕ್ತವಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.