ನವದೆಹಲಿ: ಸುಕ್ಮಾದಲ್ಲಿ ನಡೆದ 26 ಸಿಆರ್ಪಿಎಫ್ ಸಿಬ್ಬಂದಿಗಳ ಮಾರಣಹೋಮವನ್ನು ಸರ್ಕಾರ ಸವಾಲಾಗಿ ಸ್ವೀಕರಿಸಿದೆ, ಇದೊಂದು ದುರಾದೃಷ್ಟಕರ ಘಟನೆ, ಇದಕ್ಕೆ ಕಾರಣೀಕರ್ತರಾದವರನ್ನು ಖಂಡಿತ ಬಿಡಲಾರೆವು ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಮಂಗಳವಾರ ರಾಜನಾಥ್ ಅವರು ಛತ್ತೀಸ್ಗಢಕ್ಕೆ ಬಂದಿಳಿದಿದ್ದು, ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ರಮಣ್ ಸಿಂಗ್ ಅವರೊಂದಿಗೆ ಅಂತಿಮ ನಮನ ಸಲ್ಲಿಸಲ್ಲಿಸಿದರು.
ನಕ್ಸಲ್ ಉಗ್ರರು 26 ಮಂದಿ ಯೋಧರನ್ನು ಸೋಮವಾರ ಛತ್ತೀಸ್ಗಢ ಸುಕ್ಮಾ ಜಿಲ್ಲೆಯಲ್ಲಿ ಹತ್ಯೆ ಮಾಡಿದ್ದು, ಈ ಘಟನೆ ಇಡೀ ದೇಶವನ್ನು ಆಘಾತಕ್ಕೀಡು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.