ನವದೆಹಲಿ: ಪರೀಕ್ಷೆಗಳಲ್ಲಿ ಕಠಿಣ ಪ್ರಶ್ನೆಗಳಿಗೆ ನೀಡುತ್ತಿದ್ದ ಗ್ರೇಸ್ ಮಾರ್ಕ್ಗಳನ್ನು ಸಿಬಿಎಸ್ಸಿ ತೆಗೆದು ಹಾಕಿದೆ.
ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ನೇತೃತ್ವದಲಿ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಿಬಿಎಸ್ಇ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಪರೀಕ್ಷೆಯಲ್ಲಿ ಅತೀ ಕಷ್ಟದ ಪ್ರಶ್ನೆಗಳು ಬಂದ ಸಂದರ್ಭದಲ್ಲಿ 15 ಗ್ರೇಸ್ ಅಂಕಗಳನ್ನು ನೀಡುವ ಕ್ರಮವಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ಅಂಕಗಳನ್ನು ನೀಡಲಾಗುತ್ತದೆ.
ಆದರೆ ಇದರಿಂದ ಕೆಲವೊಂದು ಸಮಸ್ಯೆಗಳು ಎದುರಾಗುತ್ತಿದ್ದವು. ಹೀಗಾಗೀ ಗ್ರೇಸ್ ಮಾರ್ಕ್ ಬದಲು ಸರಿಯಾದ ಅಂಕಗಳನ್ನೇ ನೀಡುವ ಸಲುವಾಗಿ ನಿಯಮದಲ್ಲಿ ಬದಲಾವಣೆ ತರಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.