ನವದೆಹಲಿ: ದೆಹಲಿ ಸ್ಥಳಿಯಾಡಳಿತ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯವನ್ನು ದಾಖಲಿಸಿದೆ. ಆಡಳಿತರೂಢ ಎಎಪಿ ಎರಡನೇ ಸ್ಥಾನದಲ್ಲಿದ್ದಾರೆ, ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿಯಲ್ಪಟ್ಟಿದೆ.
270 ಸ್ಥಾನಗಳುಗಳ್ಳ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ನಲ್ಲಿ ಬಿಜೆಪಿ 185 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಎಎಪಿ 47 ಸ್ಥಾನಗಳಲ್ಲಿ ಜಯಿಸಿದೆ. ಕಾಂಗ್ರೆಸ್ 27 ಸ್ಥಾನಗಳನ್ನು ಗೆದ್ದುಕೊಂಡಿದೆ. ಇತರರು 11 ಸ್ಥಾನ ಗೆದ್ದಿದ್ದಾರೆ.
ಭಾನುವಾರ ದೆಹಲಿಯ ಮೂರು ಉತ್ತರ, ದಕ್ಷಿಣ ಮತ್ತು ಪೂರ್ವ ಮುನ್ಸಿಪಲ್ ಕಾರ್ಪೋರೇಶನ್ಗಳಿಗೆ ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ.
ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ಅದರ ದೆಹಲಿ ಅಧ್ಯಕ್ಷ ಅಜಯ್ ಮಕೇನ್ ಅವರು ರಾಜೀನಾಮೆ ನೀಡಿದ್ದಾರೆ. ಆದರೆ ಎಎಪಿ ಮಾತ್ರ ತನ್ನ ಸೋಲಿನ ಹೊಣೆಯನ್ನು ಮತಯಂತ್ರದ ಮೇಲೆ ಹೊರಿಸುವ ಸಾಹಸ ಮಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.