ನವದೆಹಲಿ: ಚೀನಾದ ಜುನುಹದಲ್ಲಿ ನಡೆಯುತ್ತಿರುವ ಏಷ್ಯನ್ ಗ್ರ್ಯಾಂಡ್ ಪ್ರಿಕ್ಸ್ ಅಥ್ಲೇಟಿಕ್ಸ್ ಮೀಟ್ನಲ್ಲಿ ಭಾರತೀಯ ಶಾಟ್ಪುಟ್ ಆಟಗಾರ್ತಿ ಮನ್ಪ್ರೀತ್ ಕೌರ್ ಅವರು ಬಂಗಾರದ ಪದಕ ಗೆದ್ದಿದ್ದಾರೆ. ಈ ಮೂಲಕ ತಮ್ಮ ಹಿಂದಿನ ದಾಖಲೆಯನ್ನು ತಾವೇ ಮುರಿದಿದ್ದಾರೆ.
2015ರಲ್ಲಿ ಭಾರತದಲ್ಲಿ ನಡೆದ ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಕೌರ್ 17.96 ಮೀಟರ್ ಎಸೆಯುವ ಮೂಲಕ ರಾಷ್ಟ್ರೀಯ ದಾಖಲೆ ಮಾಡಿದ್ದರು. ಇದೀಗ ಗ್ರ್ಯಾಂಡ್ ಪ್ರಿಕ್ಸ್ನಲ್ಲಿ 18.86ಮೀಟರ್ ಎಸೆಯುವ ಮೂಲಕ ತಮ್ಮ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ತಮ್ಮ ಈ ಮಹತ್ವದ ಸಾಧನೆಯ ಮೂಲಕ ಕೌರ ಅವರು ಆಗಸ್ಟ್ನಲ್ಲಿ ಲಂಡನ್ನಲ್ಲಿ ನಡೆಯಲಿರುವ ‘ಐಎಎಎಫ್ ವರ್ಲ್ಡ್ ಚಾಂಪಿಯನ್ಶಿಪ್’ಗೆ ಅರ್ಹತೆ ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.