ಮೂಡುಬಿದಿರೆ: ಹೋಮಿಯೋಪಥಿಯ ಗುಣಮಟ್ಟದ ಸೇವೆಗಳನ್ನು ಆಯುಷ್ ಮುಖಾಂತರ ದ.ಕ ಜಿಲ್ಲೆಯ ವಿವಿಧ ಭಾಗಗಳಿಗೆ ವಿಸ್ತರಿಸಿ, ಅದರ ಮಹತ್ವ ಪ್ರಯೋಜನ ಹೆಚ್ಚಿನ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಆಯುಷ್ ಶ್ರಮಿಸುತ್ತಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೊಹಮ್ಮದ್ ಇಕ್ಬಾಲ್ ಹೇಳಿದರು.
ಮಿಜಾರಿನ ಎಐಇಟಿ ಆಡಿಟೋರಿಯಂನಲ್ಲಿ ಶುಕ್ರವಾರ ಆಳ್ವಾಸ್ ಹೋಮಿಯೋಪಥಿ ಕಾಲೇಜಿನ ಆಶ್ರಯದಲ್ಲಿ `ಸರ್ಗಧಾರಾ’ ಎರಡು ದಿನಗಳ ಅಂತರ್ ಕಾಲೇಜು ಮಟ್ಟದ ಸ್ಪರ್ಧಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಸ್ಪರ್ಧೆಯನ್ನು ಉದ್ಘಾಟಿಸಿದರು. ದೇಹದ ಆರೋಗ್ಯ ಸ್ಥಿತಿಯನ್ನು ಸಮತೋಲನಗೊಳಿಸಲು ಹೋಮೊಯೋಪಥಿ ಔಷಧವನ್ನು ಪರಿಣಾಮಕಾರಿಯಾಗಿ ತರಬಹುದು. ಈ ಬಗ್ಗೆ ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಉಪಸ್ಥಿತರಿದ್ದರು. ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಪ್ರವೀಣ್ ರಾಜ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಪ್ರಾಧ್ಯಾಪಕ ರಾಖಲ್, ಶಿಲ್ಪಿ ರಿಸ್ತು ಅತಿಈಗಳನ್ನು ಪರಿಚಯಿಸಿದರು. ಡಾ.ಪ್ರಜ್ಞಾ ಆಳ್ವ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಡಾ.ಖಾದ್ರಿ ವಂದಿಸಿದರು.
ಹೋಮಿಯೋಪಥಿ ಸಂಶೋಧನಾ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಸಹಿತ 20 ವಿವಿಧ ಹೋಮಿಯೋಪಥಿ ಔಷಧಿ ತಯಾರಿಕಾ ಕಂಪೆನಿಗಳ 10 ಮಳಿಗೆಗಳಲ್ಲಿ ಪ್ರದರ್ಶನಗೊಂಡಿತು. ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಗೋವಾ ಪ್ರದೇಶಗಳ 15 ವೈದ್ಯಕೀಯ 350 ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.