ಲಕ್ನೋ: ತೊಂದರೆ ಕೊಡುವವರು ಎಷ್ಟೇ ದೊಡ್ಡ ವ್ಯಕ್ತಿಯಾದರೂ ಅವರನ್ನು ಬಿಡಬೇಡಿ, ನಮಗೆ ಕಾನೂನು ಸುವ್ಯವಸ್ಥೆ ಪಾಲನೆಯಷ್ಟೇ ಮುಖ್ಯ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಪೊಲೀಸರಿಗೆ ಆದೇಶಿಸಿದ್ದಾರೆ.
ಪ್ರತಿನಿತ್ಯ ಬೆಳಿಗ್ಗೆ 9ರಿಂದ 11 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಮತ್ತು ಅವುಗಳಿಗೆ ಪರಿಹಾರ ಕಂಡುಕೊಳ್ಳಿ ಎಂದು ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಾನೂನು ಪಾಲನೆಗೆ ಆದ್ಯತೆ ನೀಡಿ. ತಪ್ಪು ಮಾಡುವವರು ಎಷ್ಟೇ ದೊಡ್ಡ ವ್ಯಕ್ತಿಯಾಗಿರಲಿ, ಆತನ ರಾಜಕೀಯ ಬಲ, ಪ್ರಭಾವ ಯಾವುದನ್ನೂ ಗಮನಿಸದೆ ಕ್ರಮಕೈಗೊಳ್ಳಿ ಎಂದು ಆದೇಶಿಸಿದ್ದಾರೆ.
ಅಲ್ಲದೇ ಪ್ರತಿ ಗ್ರಾಮಗಳಿಗೂ ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯವರೆಗೆ ನಿರಂತರ ವಿದ್ಯುತ್ ಪೂರೈಸುವ ಸಲುವಾಗಿ ವಿದ್ಯುತ್ ಅಧಿಕಾರಿಗಳಿಗೆ ನಿರ್ದೇಶನವನ್ನೂ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.