ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ರಾಷ್ಟ್ರೀಯ ಆರೋಗ್ಯ ನಿಯಮ 2017 ನ್ನು ಘೋಷಣೆ ಮಾಡಿದ್ದಾರೆ.
ದೇಶದಲ್ಲಿ ತೆಗೆದುಕೊಳ್ಳಲಾದ ಅತಿ ಅಭಿವೃದ್ಧಿದಾಯಕ ನಿಯಮಗಳಲ್ಲಿ ಇದೂ ಒಂದಾಗಿದೆ.
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಧ್ಯೇಯದೊಂದಿಗೆ ಎನ್ಡಿಎ ಸರ್ಕಾರ ತೆಗೆದುಕೊಂಡ ಅತಿ ಮಹತ್ವದ ದೀರ್ಘಾವಧಿ ಚಟುವಟಿಕೆಗಳನ್ನೊಳಗೊಂಡ ನಿಯಮ ಇದು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.
ರಾಷ್ಟ್ರೀಯ ಆರೋಗ್ಯ ನಿಯಮ 2017 ಹಲವಾರು ಪ್ರಮುಖ ಅಂಶಗಳನ್ನೊಳಗೊಂಡಿದೆ. ಆದರೆ ಇದರ ಅತಿ ಮುಖ್ಯ ಗುರಿ ಸಮಗ್ರ ಮತ್ತು ಸದೃಢ ಆರೋಗ್ಯ. ಇದನ್ನು ಸಾಧಿಸುವುದಕ್ಕಾಗಿ ಕೇಂದ್ರ ಹಲವಾರು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಚಿವ ನಡ್ಡಾ ಹೇಳಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಉತ್ತಮ ಸೇವೆಯನ್ನು ಒದಗಿಸುವುದು ಮತ್ತು ಆರೋಗ್ಯ ಕೇಂದ್ರಗಳ ಪರಿಶೀಲನೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.