ಲಖ್ನೋ : ಮಧ್ಯ ಪ್ರದೇಶ ಪ್ರಸ್ತುತ ನಡೆಸುತ್ತಿರುವ ನರ್ಮದಾ ನದಿ ಸಂರಕ್ಷಣಾ ಕಾರ್ಯಕ್ರಮಗಳಂತೆಯೇ ನಮ್ಮ ಸರ್ಕಾರ ಮಹತ್ವದ ನಮಾಮಿ ಗಂಗೆ ಅಭಿಯಾನವನ್ನು ನಡೆಸಲಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ನಮಾಮಿ ದೇವಿ ನರ್ಮದೆ ಸೇವಾ ಯಾತ್ರೆ ಬಗ್ಗೆ ಮಧ್ಯಪ್ರದೇಶದ ಶಹಾಪುರದಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಲ್ಲಿನ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಕಾರ್ಯವನ್ನು ಶ್ಲಾಘಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ತಮ್ಮ ಮಹತ್ವಾಕಾಂಕ್ಷೆಯ ಗಂಗಾ ಸಂರಕ್ಷಣಾ ಯೋಜನೆಯನ್ನು ಆರಂಭಿಸಿದ್ದಾರೆ. ಅದನ್ನು ಸಾಧಿಸುವ ಮಹತ್ವದ ಸವಾಲು ನಮ್ಮ ಮುಂದಿದೆ.
ಚೌಹಾಣ್ ಅವರು ಹಲವು ವರ್ಷಗಳಿಂದ ನದಿ ಸಂರಕ್ಷಣಾ ಅಭಿಯಾನ ನಡೆಸುತ್ತಿದ್ದಾರೆ. ಇಲ್ಲಿಗೆ ಬಂದು ಅದನ್ನು ಗಮನಿಸಿ ನಮಾಮಿ ಗಂಗೆ ಯೋಜನೆಯನ್ನು ಅದೇ ಮಾದರಿಯಲ್ಲಿ ಮುಂದೆ ಕೊಂಡೊಯ್ಯಲು ಪ್ರಯತ್ನಿಸುತ್ತೇನೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.