ನವದೆಹಲಿ : ಕೇಂದ್ರ ಸರ್ಕಾರದ ಅತಿ ಮಹತ್ವದ ರಿಯಲ್ ಎಸ್ಟೇಟ್ ಕಾಯ್ದೆ ಇಂದಿನಿಂದ ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತಗಳಲ್ಲಿ ಜಾರಿಯಾಗುತ್ತಿದೆ.
ಈ ಕಾಯ್ದೆ ಗ್ರಾಹಕರ ಹಕ್ಕು ಮತ್ತು ಭೂ ವ್ಯವಹಾರದಲ್ಲಿ ಪಾರದರ್ಶಕತೆಯನ್ನು ತರಲಿದೆ.
ರಿಯಲ್ ಎಸ್ಟೇಟ್ ವ್ಯವಹಾರಿಗಳು ಇದನ್ನು ಸ್ವಾಗತಿಸಿದ್ದು, ಇದು ಭಾರತೀಯ ರಿಯಲ್ ಎಸ್ಟೇಟ್ ಕಾರ್ಯದಲ್ಲಿ ಮಹತ್ವದ ಬದಲಾವಣೆ ತರಲಿದೆ ಎಂದು ನಿರೀಕ್ಷಿಸಲಾಗಿದೆ.
ಕಳೆದ ಮಾರ್ಚ್ನಲ್ಲಿ ಸಂಸತ್ತಿನಲ್ಲಿ ಈ ಮಸೂದೆಯನ್ನು ಅಂಗೀಕರಿಸಲಾಗಿತ್ತು.
ಹೆಚ್ಚು ನಿಖರ, ಪಾರದರ್ಶಕತೆ ಮತ್ತು ದಕ್ಷತೆಯಿಂದ ಈ ಕಾಯ್ದೆ ಜಾರಿಗೆ ಬರಲಿದೆ. ಈ ಕಾಯ್ದೆ ಗ್ರಾಹಕರನ್ನು ‘ಅರಸ’ರನ್ನಾಗಿಸಲಿದೆ ಎಂದು ಕೇಂದ್ರ ಸಚಿವ ವೆಂಕಯ್ಯನಾಯ್ಡು ಹೇಳಿದ್ದಾರೆ.
13 ರಾಜ್ಯ ಮತ್ತು ಕೇಂದ್ರಾಡಳಿತಗಳಲ್ಲಿ ಮಾತ್ರ ಇದು ಇಂದಿನಿಂದ ಜಾರಿಯಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.