ಲಕ್ನೋ: ಮದ್ಯ ಮಾರಾಟಕ್ಕೆ ಸಂಬಂಧಪಟ್ಟಂತೆ ಉತ್ತರಪ್ರದೇಶ ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಗಳನ್ನು ಜಾರಿಗೆ ತರಲಿದೆ. ಇದರ ಅನ್ವಯ ಹೆದ್ದಾರಿ, ಶಾಲಾ ಕಾಲೇಜುಗಳ, ಜನನಿಬಿಡ ಪ್ರದೇಶಗಳ ಮತ್ತು ಧಾರ್ಮಿಕ ಕೇಂದ್ರಗಳ ಸಮೀಪ ಮದ್ಯದಂಗಡಿ ಇಡುವಂತಿಲ್ಲ.
ಲಕ್ನೋದಲ್ಲಿ ನಡೆಯುತ್ತಿರುವ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ವೇಳೆ ಸಿಎಂ ಯೋಗಿ ಆದಿತ್ಯನಾಥ ಅವರು ಈ ಘೋಷಣೆ ಮಾಡಿದ್ದಾರೆ.
ಮದ್ಯದ ಅಮಲಿನಲ್ಲಿ ಇತ್ತೀಚಿಗೆ ಉತ್ತರಪ್ರದೇಶದಲ್ಲಿ ಸಾಕಷ್ಟು ಅಪರಾಧ ಕೃತ್ಯಗಳು ನಡೆದಿವೆ, ಈ ಹಿನ್ನಲೆಯಲ್ಲಿ ಯೋಗಿ ಸರ್ಕಾರ ಈ ಮಹತ್ವದ ನಿಯಮಾವಳಿಗಳನ್ನು ತರಲು ಮುಂದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.