ನವದೆಹಲಿ: ಕರ್ನಾಟಕದಲ್ಲಿ ನಗರ ವಲಯ ಯೋಜನೆಗಳ ಪ್ರಗತಿಯ ಬಗ್ಗೆ ಕೇಂದ್ರ ನಗರಾಭಿವೃದ್ಧಿ ಮತ್ತು ವಸತಿ ಸಚಿವ ವೆಂಕಯ್ಯನಾಯ್ಡು ಪರಿಶೀಲನೆ ನಡೆಸಲಿದ್ದಾರೆ.
ಕಳೆದ ಮೂರು ವರ್ಷಗಳಿಂದ ಕರ್ನಾಟಕದ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ 25 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ಹೂಡಲು ಸಮ್ಮತಿಸಿದೆ. ಇದರ ಪ್ರಗತಿಯ ಪರಿಶೀಲನೆ ನಡೆಸುವ ಸಲುವಾಗಿ ಬುಧವಾರ ನಾಯ್ಡು ಅವರು ಬೆಂಗಳೂರಿನಲ್ಲಿ ‘ಪ್ರಗತಿ ಪರಿಶೀಲನಾ’ ಸಭೆ ನಡೆಸಲಿದ್ದಾರೆ.
ಕರ್ನಾಟಕದ ನಗರಾಭಿವೃದ್ಧಿ ಮತ್ತು ವಸತಿ ಸಚಿವ, ರಾಜ್ಯ ಮುಖ್ಯ ಕಾರ್ಯದರ್ಶಿ, ಕೇಂದ್ರ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಹಲವಾರು ನಗರ ಯೋಜನೆಗಳಡಿ ಕರ್ನಾಟಕದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 20 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಕೇಂದ್ರ ಸಮ್ಮತಿ ನೀಡಿದೆ. ಕೇಂದ್ರ 9 ಸಾವಿರ ಹಣಕಾಸು ನೆರವು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.