ನವದೆಹಲಿ: ಬ್ಯಾಂಕಿಂಗ್ ವಲಯಕ್ಕೆ ಸಂಬಂಧಿಸಿದಂತೆ ಸಂಪುಟ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಇದೀಗ ಅದನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಿಕೊಡಲಾಗಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಮಾಹಿತಿ ನೀಡಿದ್ದಾರೆ.
ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರಪತಿಗಳ ಅಂಕಿತ ಬೀಳುವವರೆಗೂ ತೆಗೆದುಕೊಳ್ಳಲಾದ ನಿರ್ಧಾರಗಳನ್ನು ಬಹಿರಂಗವಾಗಿಸುವುದಿಲ್ಲ ಎಂದರು.
ಮೂಲಗಳ ಪ್ರಕಾರ ಇಂದು ರಾತ್ರಿ ರಾಷ್ಟ್ರಪತಿಗಳು ಇದಕ್ಕೆ ಅಂಕಿತ ಹಾಕಲಿದ್ದು, ನಾಳೆ ಅದು ಬಹಿರಂಗವಾಗಲಿದೆ.
ನಾನ್ ಪಫಾರ್ಮಿಂಗ್ ಅಸೆಟ್ಗಳ ಬಗೆಗಿನ ಆದೇಶವನ್ನು ರಾಷ್ಟ್ರಪತಿಗಳಿಗೆ ಕೇಂದ್ರ ಕಳುಹಿಸಿಕೊಡಲಾಗಿದೆ ಎಂಬ ಗುಮಾನಿ ಇದ್ದು, ಈ ಆದೇಶದಲ್ಲಿನ ವಿಷಯಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.